Bomb planting case Prashanth Sambargi demands re-investigation against Girish Mattannavar
x

ಮಾಜಿ ಪೊಲೀಸ್‌ ಅಧಿಕಾರಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ

ಬಾಂಬ್‌ ಇಟ್ಟ ಪ್ರಕರಣ| ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮರು ತನಿಖೆಗೆ ಪ್ರಶಾಂತ್‌ ಸಂಬರಗಿ ಆಗ್ರಹ

ಪ್ರಕರಣವು ನ್ಯಾಯಾಲಯದಲ್ಲಿ ಖುಲಾಸೆಯಾಗಿದೆ. ಆದರೆ, ಇದೀಗ ಆ ಪ್ರಕರಣವನ್ನು ಮತ್ತೆ ಮರು ತನಿಖೆಗೆ ಒಳಪಡಿಸಬೇಕು. ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯದ(ಇ.ಡಿ) ತನಿಖೆಗೂ ಒಳಪಡಿಸಬೇಕು ಎಂದು ಸಂಬರಗಿ ತಿಳಿಸಿದ್ದಾರೆ.


Click the Play button to hear this message in audio format

ಶಾಸಕರ ಭವನಕ್ಕೆ ಬಾಂಬ್‌ ಬೆದರಿಕೆ ಪ್ರಕರಣದಲ್ಲಿ ಖುಲಾಸೆಯಾಗಿರುವ ಮಾಜಿ ಪೊಲೀಸ್‌ ಅಧಿಕಾರಿ ಗಿರೀಶ್‌ ಮಟ್ಟಣ್ಣವರ್‌ ವಿರುದ್ದ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದ್ದಾರೆ.

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ(ಡಿಜಿ ಮತ್ತು ಐಜಿ) ಕಚೇರಿ, ನಗರ ಪೊಲೀಸ್‌ ಕಮಿಷನರ್‌ ಕಚೇರಿ ಹಾಗೂ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಪ್ರಕರಣವು ನ್ಯಾಯಾಲಯದಲ್ಲಿ ಖುಲಾಸೆಯಾಗಿದೆ. ಆದರೆ, ಈ ಪ್ರಕರಣವನ್ನು ಮತ್ತೆ ಮರು ತನಿಖೆಗೆ ಒಳಪಡಿಸಬೇಕು. ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯದ(ಇ.ಡಿ) ತನಿಖೆಗೂ ಅವರನ್ನು ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ದೂರಿನಲ್ಲೇನಿದೆ ?

ಗಿರೀಶ್‌ ಮಟ್ಟಣ್ಣವರ್‌ ತಾವೇ ಬಾಂಬ್ ತಯಾರಿಸಿ ಇಟ್ಟಿರುವುದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಹಲವು ವಿಡಿಯೊಗಳು ಹರಿದಾಡುತ್ತಿವೆ. ಹೀಗಾಗಿ, ಪ್ರಕರಣ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ, ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ ಎಂದು ಉಲ್ಲೇಖಿಸಿದ್ದಾರೆ.

ಬಾಂಬ್‌ ಬೆದರಿಕೆ ಪ್ರಕರಣ ಏನು?

ಭ್ರಷ್ಟ ರಾಜಕಾರಣಿಗಳನ್ನು ಬೆದರಿಸಲು 2003ರಲ್ಲಿ ಶಾಸಕರ ಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿದ್ದ ಗಿರೀಶ್‌ ಮಟ್ಟಣ್ಣವರ್‌ ಹುಸಿ ಕರೆ ಮಾಡಿದ್ದರು. ಇದು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಸುಮಾರು 13 ವರ್ಷಗಳ ನಂತರ 2016ರಲ್ಲಿ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದ ನಗರದ 66ನೇ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್, ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ಹಾಗೂ ಇತರೆ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಧರ್ಮಸ್ಥಳದಲ್ಲಿ ಅಸಹಜ ಸಾವುಗಳು ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಗಿರೀಶ್‌ ಮಟ್ಟಣ್ಣವರ್‌ ವಿರುದ್ಧ ಹಳೆಯ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿರುವುದರಿಂದ ಇದು ಹೆಚ್ಚು ಮಹತ್ವ ಪಡೆದುಕೊಂಡಿದೆ.

Read More
Next Story