
ಬಿಡದಿ ಪೊಲೀಸ್
Bomb Threat | ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ.
ರಾಮನಗರದ ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದೆ ಪರಿಶೀಲನೆ ನಡೆಸಿದೆ.
ಬಿಡದಿ ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಬೆದರಿಕೆಯೊಡ್ಡಿದ್ದು, ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆ ಮಂಗಳವಾರ ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ರೈಲು ನಿಲ್ದಾಣ, ಪ್ರಯಾಣಿಕರು ಹಾಗೂ ರೈಲುಗಳನ್ನು ತಪಾಸಣೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ರೈಲ್ವೆ ಪೊಲೀಸರು ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಬಾಂಬ್‌ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಇತ್ತೀಚೆಗೆ ಮೈಸೂರು ರೈಲು ನಿಲ್ದಾಣಕ್ಕೂ ಇಂತಹ ಬಾಂಬ್ ಬೆದರಿಕೆ ಕರೆ ಬಂದಿತ್ತು. ಆದರೆ ಪರಿಶೀಲನೆಯ ಬಳಿಕ ಅದು ಸುಳ್ಳು ಎಂದು ತಿಳಿದುಬಂದಿತ್ತು. ಹಾಗೆಯೇ ಉತ್ತರ ಪ್ರದೇಶದ ಒಂಬತ್ತು ಜಿಲ್ಲೆಗಳ ರೈಲು ನಿಲ್ದಾಣಗಳು ಮತ್ತು ದೇವಾಲಯಗಳಿಗೆ ಸ್ಫೋಟಕಗಳ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಭದ್ರತೆ ಬಿಗಿಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಬಿಡದಿ ರೈಲು ನಿಲ್ದಾಣದ ಘಟನೆಯ ಕುರಿತು ಎಲ್ಲಿಂದ ಕರೆ ಬಂದಿದೆ? ಕರೆ ಮಾಡಿದವರು ಯಾರು? ಎಂಬುದರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.