ಅನ್ವರ್‌ ಮಾಣಿಪ್ಪಾಡಿ ವರದಿ ಆಧರಿಸಿ ವಕ್ಫ್‌ ವಿವಾದ ಕುರಿತು ಎಸ್‌ಐಟಿ, ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ
x

ಅನ್ವರ್‌ ಮಾಣಿಪ್ಪಾಡಿ ವರದಿ ಆಧರಿಸಿ ವಕ್ಫ್‌ ವಿವಾದ ಕುರಿತು ಎಸ್‌ಐಟಿ, ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ

ನಾನು ಅಂದು ಹೇಳಿರುವುದು ಅನ್ವರ್ ಮಾಣಿಪ್ಪಾಡಿ ಅವರ ಸಮಿತಿ ವರದಿ ನೀಡಿರುವಂತೆ ಕಾಂಗ್ರೆಸ್ ನ್ ಕೆಲವು ದೊಡ್ಡ ನಾಯಕರು ಮೋಸದಿಂದ ಎಷ್ಟೆಷ್ಟು ವಕ್ಪ್ ಆಸ್ತಿ ನುಂಗಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು.


ವಕ್ಪ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ನೀಡಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಎಸ್‌ಐಟಿ ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಕ್ಪ್ ಸಚಿವರಾದ ಜಮೀರದ ಅಹಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೊ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಯಾವುದೇ ವಕ್ಪ್ ಬೋರ್ಡ್ ಸಭೆ ಮಾಡಿಲ್ಲ. ವಕ್ಪ್ ಬೋರ್ಡ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವಂತೆ, ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಪಡಿಸಿಕೊಳ್ಳಬೇಕೆಂದು ಹೇಳಿದ್ದೆ. ಆ ಹೇಳಿಕೆಯನ್ನು ತಿರುಚಿದ್ದಾರೆ. ಆ ಸಂದರ್ಭದಲ್ಲಿ ರೈತರ ಜಮೀನಿಗೆ ನೊಟೀಸ್ ಕೊಡುವುದಾಗಲಿ, ಪಹಣಿ ತಿದ್ದುಪಡಿ ಮಾಡುವ ವಿಷಯ ನಮ್ಮ ಮುಂದೆ ಪ್ರಸ್ತಾಪವಾಗಿರಲಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಅನ್ವರ್ ಮಾಣಿಪ್ಪಾಡಿ ಅವರ ಸಮಿತಿ ವರದಿ ನೀಡಿರುವಂತೆ ಕಾಂಗ್ರೆಸ್‌ನ ಕೆಲವು ದೊಡ್ಡ ನಾಯಕರು ಮೋಸದಿಂದ ವಕ್ಪ್ ಆಸ್ತಿ ನುಂಗಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ನಾನು ಅಂದು ಹೇಳಿದ್ದೆ. ನಮ್ಮ ಅವಧಿಯಲ್ಲಿ ರೈತರಿಗೆ ಯಾವುದೇ ನೊಟಿಸ್ ಕೊಟ್ಟಿಲ್ಲ ರೈತರ ಜಮೀನು ವಶ ಪಡೆದುಕೊಂಡಿಲ್ಲ. ಸಚಿವ ಜಮೀರ್‌ ಅವರು ರೈತರಿಗೆ ನೋಟಿಸ್ ಕೊಡುವ ಮೊದಲು ಕಾಂಗ್ರೆಸ್ ನಾಯಕರು ಅತಿಕ್ರಮಣ ಮಾಡಿಕೊಂಡಿರುವ ವಕ್ಫ್‌ ಆಸ್ತಿಯನ್ನು ವಿಲೇವಾರಿ ಮಾಡಲಿ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರ. ನೋಟಿಸ್ ವಾಪಸ್ ಪಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟೀಸ್ ಕೊಡುವುದಿಲ್ಲ ಅನ್ನುವುದಕ್ಕೆ ಖಾತರಿ ಏನು? ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ನಿಜವಾಗಲೂ ಕಾಳಜಿ, ಗೌರವ ಇದ್ದರೆ, ರೈತರ ಆಸ್ತಿ ಉಳಿಸಬೇಕೆಂಬ ಮನಸ್ಸಿದ್ದರೆ ಕೂಡಲೆ ವಕ್ಪ್ ಗೆಜೆಟ್ ನೊಟಿಫಿಕೇಶ್ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Read More
Next Story