ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಯುಪಿಐ ಸಮಸ್ಯೆ ಪರಿಹಾಕ್ಕೆ ಲಂಚ ಆಮಿಷದ ಆರೋಪ; ಕಠಿಣ ಕ್ರಮದ ಎಚ್ಚರಿಕೆ
x

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಯುಪಿಐ ಸಮಸ್ಯೆ ಪರಿಹಾಕ್ಕೆ ಲಂಚ ಆಮಿಷದ ಆರೋಪ; ಕಠಿಣ ಕ್ರಮದ ಎಚ್ಚರಿಕೆ

ವಾಣಿಜ್ಯ ತೆರಿಗೆ ಇಲಾಖೆಯು ಇಂತಹ ಪ್ರಕರಣಗಳನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳು ಅಥವಾ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಯುಪಿಐ. (UPI) ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆಂಬ ವರದಿಗಳ ಬೆನ್ನಲ್ಲೇ, ಇಲಾಖೆಯು ಈ ಕುರಿತು ಗಂಭೀರ ಎಚ್ಚರಿಕೆ ನೀಡಿದೆ. ಕೆಲವು ಮಧ್ಯವರ್ತಿಗಳು ವ್ಯಾಪಾರಸ್ಥರಿಗೆ ನೆರವಾಗುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿದೆ.

ವಾಣಿಜ್ಯ ತೆರಿಗೆ ಇಲಾಖೆಯು ಇಂತಹ ಪ್ರಕರಣಗಳನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳು ಅಥವಾ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ.

ವ್ಯಾಪಾರಸ್ಥರು ಇಂತಹ ಯಾವುದೇ ಲಂಚದ ಬೇಡಿಕೆ ಅಥವಾ ಮಧ್ಯವರ್ತಿಗಳ ಹಾವಳಿಯನ್ನು ತಕ್ಷಣವೇ ಇಲಾಖೆಯ ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಸಹಾಯವಾಣಿ ದೂರವಾಣಿ ಸಂಖ್ಯೆ 1800 425 6300 ಅನ್ನು ಸಂಪರ್ಕಿಸಬಹುದು. ಈ ಸಹಾಯವಾಣಿ ರಜಾದಿನಗಳನ್ನು ಹೊರತುಪಡಿಸಿ, ಪ್ರತಿದಿನ ಬೆಳಿಗ್ಗೆ 8:00 ರಿಂದ ರಾತ್ರಿ 8:00 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತದೆ. ಈ ಕುರಿತು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
Next Story