ಕಳವು ಚಿನ್ನ ಖರೀದಿ ಆರೋಪ | ಅಟ್ಟಿಕಾ ಗೋಲ್ಡ್ ಮಾಲೀಕ ಮತ್ತೊಮ್ಮೆ ಬಂಧನ
ಕಳ್ಳರು ಕದ್ದ ಚಿನ್ನವನ್ನು ಖರೀದಿ ಮಾಡಿದ ಆರೋಪದಡಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಮತ್ತೊಮ್ಮೆ ಬಂಧನವಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಶನಿವಾರ (ಜೂ.29) ಬಂಧಿಸಿದ್ದಾರೆ.
ಕಳ್ಳರು ಕದ್ದ ಚಿನ್ನವನ್ನು ಖರೀದಿ ಮಾಡಿದ ಆರೋಪದಡಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಮತ್ತೊಮ್ಮೆ ಬಂಧನವಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಶನಿವಾರ (ಜೂ.29) ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಾಂಗಲ್ಯ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬು ಅವರನ್ನು ಬಂಧಿಸಲಾಗಿದೆ.
ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಐದು ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದ್ದಾರೆ.
ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸರು ಬುಧವಾರ (ಜೂ.26) ಅವರನ್ನು ಬೆಂಗಳೂರಿನ ಪ್ರೇಜರ್ ಟೌನ್‌ನಲ್ಲಿರುವ ಮನೆ ಬಳಿ ಬಂಧಿಸಿದ್ದರು.
ತುಮಕೂರು ಜಿಲ್ಲಾ ಕಾರಾಗೃಹದಿಂದ ಶನಿವಾರ ಜಾಮೀನು ಪಡೆದು ಬಿಡುಗಡೆಯಾದ ಅವರನ್ನು ಅದೇ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಪೊಲೀಸ್ ಠಾಣೆ ಮುಂದೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 2016 ರಲ್ಲಿ ನಾನು ಅಟ್ಟಿಕಾ ಗೋಲ್ಡ್ ಕಂಪನಿಗೆ ರಿಸೈನ್ ಮಾಡಿದ್ದೇನೆ. ವಿನಾಕಾರಣ ಪೊಲೀಸರು ನನ್ನನ್ನು ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡುತ್ತಿದ್ದಾರೆ. ಕೆಲ ಕೇಸ್‌ಗಳಲ್ಲಿ ನಾನು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ. ಆದರೂ ನನ್ನನ್ನು ಕೇಸ್‌ಗಳಲ್ಲಿ ಸಿಕ್ಕಿಸುವ ಸಂಚು ನಡೆಯುತ್ತಿದೆ, ಇದು ರಾಜಕೀಯ ಪಿತೂರಿ ಎಂದರು.