Karnataka By Election | ಉಪ ಚುನಾವಣೆ ಫಲಿತಾಂಶ ನಾಯಕತ್ವದ ಮೇಲೆ ಪರಿಣಾಮ ಬೀರಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌
x

Karnataka By Election | ಉಪ ಚುನಾವಣೆ ಫಲಿತಾಂಶ ನಾಯಕತ್ವದ ಮೇಲೆ ಪರಿಣಾಮ ಬೀರಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಕೋವಿಡ್ ನಿರ್ವಹಣೆಯಲ್ಲಿ10 ಸಾವಿರ ಕೋಟಿ ಹಗರಣ ನಡೆದಿರುವುದಾಗಿ ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.


ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ರಾಜ್ಯ ನಾಯಕತ್ವ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದಾರೆ.

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್‌ ಪಠಾಣ್ ಪರ ಪ್ರಚಾರದ ವೇಳೆ ಕಲ್ಯಾಣ ಗ್ರಾಮದಲ್ಲಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಸರ್ಕಾರ ಸುಭದ್ರವಾಗಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷ ನಾಯಕರಿಂದ ಸಾಧ್ಯವಿಲ್ಲ. ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ದಾಖಲಿಸಲಿದ್ದಾರೆ. ಗ್ಯಾರೆಂಟಿ ಯೋಜನೆಗಳು ಅಭ್ಯರ್ಥಿಗಳ ಗೆಲುವಿಗೆ ಸಹಾಯ ಮಾಡಲಿವೆ ಎಂದು ಹೇಳಿದ್ದಾರೆ.

ಕೋವಿಡ್ ಅವಧಿಯಲ್ಲಿ ನಡೆದಿರುವ ಭಾರೀ ಭ್ರಷ್ಟಾಚಾರ ಜನರಿಗೆ ಗೊತ್ತಾಗಿದೆ. ಹಗರಣಕ್ಕೆ ಸಂಬಂಧಿಸಿ ಸರ್ಕಾರ ಈಗಾಗಲೇ ದಾಖಲೆ ಬಿಡುಗಡೆ ಮಾಡಿದೆ. ಭ್ರಷ್ಟಾಚಾರ ನಡೆದಿರುವ ಕುರಿತು ಮೈಕೆಲ್‌ ಡಿ ಕುನ್ಹಾ ಆಯೋಗ ಕೂಡ ವರದಿ ನೀಡಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ10 ಸಾವಿರ ಕೋಟಿ ಹಗರಣ ನಡೆದಿರುವುದಾಗಿ ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಈ ಕುರಿತು ಸರ್ಕಾರ ನಡೆಸುತ್ತಿರುವ ತನಿಖೆ ಮುಂದುವರಿದ ಭಾಗವಷ್ಟೇ ಎಂದು ಹೇಳಿದ್ದಾರೆ.

ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯದ ಮಹಿಳೆಯರು ಹೋದ ಕಡೆಯಲ್ಲೆಲ್ಲಾ ಧನ್ಯತಾ ಭಾವ ತೋರುತ್ತಿದ್ದಾರೆ. ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 28 ಲಕ್ಷ ಜನ ಫಲಾನುಭವಿಗಳಿದ್ದು, ಎಲ್ಲರಿಗೂ ಸಮರ್ಪಕ ಹಣ ತಲುಪುತ್ತಿದೆ. ಆದರೆ, 82 ಸಾವಿರ ಮಹಿಳೆಯರಿಗೆ ಕೆಲ ಕಾರಣಗಳಿಂದ ಹಣ ತಲುಪಿಲ್ಲ. ಅದರಲ್ಲಿ ನಮ್ಮ ತಪ್ಪಿಲ್ಲ. ಮಾನದಂಡಗಳಿಗೆ ಒಳಪಡದವರಿಗೆ ಹಣ ನೀಡಲು ಸಾಧ್ಯವಿಲ್ಲ ಎಂದು ಹಿಂಬರಹ ಸಹ ನೀಡಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Read More
Next Story