ಮೆಟ್ರೋ 3ನೇ ಹಂತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
x

ಮೆಟ್ರೋ 3ನೇ ಹಂತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಇನ್ನೇನು ಮೆಟ್ರೋ ಹಂತ 2 ಎ ಮತ್ತು 2 ಬಿ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಭವಿಷ್ಯದ ಅವಶ್ಯಕತೆಯನ್ನು ಗಮನದಲ್ಲಿರಿಸಿ ಮೆಟ್ರೋ ರೈಲು ಹಂತ-3 ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.


ಗುರುವಾರ (ಮಾರ್ಚ್‌ 14) ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿಗೆ ಮೆಟ್ರೋ ೩ನೇ ಹಂತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಬೆಂಗಳೂರಿನ ವಾಹನ ದಟ್ಟಣೆ ನಿವಾರಿಸುವ ಕ್ರಮವಾಗಿ ಮೆಟ್ರೋ ಮೂರನೇ ಹಂತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.

ಇನ್ನೇನು ಮೆಟ್ರೋ ಹಂತ 2 ಎ ಮತ್ತು 2 ಬಿ ಕಾಮಗಾರಿ ಇನ್ನೆರಡು ವರ್ಷಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಭವಿಷ್ಯದ ಅವಶ್ಯಕತೆಯನ್ನು ಗಮನದಲ್ಲಿರಿಸಿ ಮೆಟ್ರೋ ರೈಲು ಹಂತ-3 ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆಯನ್ನು ನೀಡಿದೆ.

44.65 ಕಿ.ಮೀ ಉದ್ದದ ಎರಡು ಕಾರಿಡಾರ್ ಗಳನ್ನು (ಕಾರಿಡಾರ್-1 ಜೆಪಿನಗರ 4 ನೇ ಹಂತದಿಂದ ಕೆಂಪಾಪುರದವರೆಗೆ 32.15 ಕಿ.ಮೀ. ಹಾಗೂ ಕಾರಿಡಾರ್ -2 ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.50 ಕಿ.ಮೀ.) ಒಟ್ಟು ಅಂದಾಜು ವೆಚ್ಚ ರೂ.15,611 ಕೋಟಿಗಳಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮೆಟ್ರೋ 3 ಹಂತಕ್ಕೆ 2028 ರಲ್ಲಿ ಚಾಲನೆ ನೀಡುವ ಗುರಿ ಇದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಈ ಯೋಜನೆಯ ಶೇ.85 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ನೀಡಲಿದೆ.

Read More
Next Story