
Cabinet Meeting | ಅಕ್ರಮ ಗಣಿಗಾರಿಕೆ ಪ್ರಕರಣ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪನೆಗೆ ಸಂಪುಟ ಅಸ್ತು
ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿ ನೀಡಿದ ವರದಿಗೆ ಸಂಪುಟ ಒಪ್ಪಿಗೆ ನೀಡಿದೆ. ಇದಲ್ಲದೇ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ರಚಿಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ ದಾಖಲಾಗಿರುವ ಅಕ್ರಮ ಗಣಿಗಾರಿಕೆ ಪ್ರಕರಣಗಳ ಇತ್ಯರ್ಥಕ್ಕೆ ತ್ವರಿತಗತಿಯ ನ್ಯಾಯಾಲಯ ಸ್ಥಾಪಿಸಲು ಸಚಿವ ಸಂಪುಟ ತೀರ್ಮಾನಿಸಿದೆ.
ಮಂಗಳವಾರ ರಾತ್ರಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿ ನೀಡಿದ ವರದಿಗೆ ಸಂಪುಟ ಒಪ್ಪಿಗೆ ನೀಡಿದೆ. ಇದಲ್ಲದೇ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ರಚಿಸಲು ತೀರ್ಮಾನಿಸಿದ್ದು, ಇದೇ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಗಳ ತ್ವರಿತ ಇತ್ಯರ್ಥ ಮಾಡುವ ಬಗ್ಗೆ ಸರ್ಕಾರಕ್ಕೆ ಕಾನೂನು ಸಚಿವ ಎಚ್.ಕೆ ಪಾಟೀಲ್ ಅವರು ಪತ್ರ ಬರೆದಿದ್ದರು. ಎಚ್.ಕೆ ಪಾಟೀಲ್ ನೇತೃತ್ವದಲ್ಲೇ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿತ್ತು.
ಸಚಿವ ಸಂಪುಟ ಉಪಸಮಿತಿ ನೀಡಿದ ಶಿಫಾರಸು ಜಾರಿಗೊಳಿಸಲು ಸಂಪುಟ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.
Next Story