CAFE BLAST | ಸ್ಥಳಕ್ಕೆ ಸಿಎಂ ಭೇಟಿ; SIT ತನಿಖೆಗೆ ಚಿಂತನೆ
ಬೆಂಗಳೂರು : ರಾಜ್ಯಾದ್ಯಂತ ಸಂಚಲ ಮೂಡಿಸಿರುವ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಘಟನೆ ನಡೆದಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿದ್ದರು. ಇಂದು ಬೆಂಗಳೂರಿಗೆ ಬಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ವೈದೇಹಿ ಆಸ್ಪತ್ರೆಗೆ ಕೂಡ ಭೇಟಿ ನೀ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಪ್ರಕರಣ ತನಿಖೆಯನ್ನು ಎಸ್ಐಟಿಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.
Next Story