
CAFE BLAST | ಮೆಜೆಸ್ಟಿಕ್, ಏರ್ ಪೋರ್ಟ್ ನಲ್ಲಿ 'ಹೈ ಅಲರ್ಟ್'..!
ಬೆಂಗಳೂರು: ಶುಕ್ರವಾರ ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರದ ಸುತ್ತ ಹದ್ದಿನ ಕಣ್ಣಿಟ್ಟಿದ್ದು, ಮೆಜೆಸ್ಟಿಕ್ ಹಾಗೂ ಏರ್ ಪೋರ್ಟ್ ಸುತ್ತಾಮುತ್ತ ಕಟ್ಟೆಚ್ಚರ ವಹಿಸಿದ್ದಾರೆ.
ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ನಿಗಾ ವಹಿಸಿದ್ದು, ಪ್ರತಿ ಪ್ರಯಾಣಿಕರ ಬ್ಯಾಗ್ ಚೆಕ್ ಮಾಡಿ ಒಳಗೆ ಬಿಡುತ್ತಿದ್ದಾರೆ. ದೇಶ, ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೂ ಕಣ್ಣಿಟ್ಟಿದ್ದಾರೆ.
ನಗರದ ಕೇಂದ್ರ ಭಾಗ ಮೆಜೆಸ್ಟಿಕ್ ನಲ್ಲಿ ಕೂಡ ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹೋಂ ಗಾರ್ಡ್‌ಗಳನ್ನು ನಿಯೋಜನೆ ಮಾಡಲಾಗಿದೆ. ಅನುಮಾನಾಸ್ಪದ ವ್ಯಕ್ತಿ ಹಾಗೂ ಬ್ಯಾಗ್ಗಳನ್ನು ತಪಾಸಣೆ ಮಾಡಲಾಗುತ್ತಿದೆ.
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದ ಬಗ್ಗೆ ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ತಂಡ ಶುಕ್ರವಾರ ತನಿಖೆ ನಡೆಸಿತು. ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದಾರೆ.
Next Story