
Cafe Blast: ಬಾಂಬರ್‌ನ ಸ್ಪಷ್ಟ ಚಿತ್ರಗಳನ್ನು ಬಿಡುಗಡೆ ಮಾಡಿದ NIA
ಬೆಂಗಳೂರು: ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಭಾವಚಿತ್ರಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ಬಾಂಬರ್‌ಗಾಗಿ ಭಾರಿ ಶೋಧನೆ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಶಂಕಿತನ ಎಲ್ಲ ಸಂಚಾರ ಸುಳಿವನ್ನು ಜಾಲಾಡುತ್ತಿದ್ದರೂ ಆತ ಪೊಲೀಸರ ಕಣ್ತಪ್ಪಿಸಿಕೊಂಡೇ ಓಡಾಡುತ್ತಿದ್ದಾನೆ. ಹೀಗಾಗಿ, ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಶಂಕಿತ ಉಗ್ರ ಬಳ್ಳಾರಿಯಲ್ಲಿ ಸಂಚಾರ ಮಾಡಿದ ಸಿಸಿಟಿವಿ ಕ್ಯಾಮರಾವನ್ನು ಆಧರಿಸಿ ರಾಷ್ಟ್ರೀಯ ತನಿಖಾ ದಳದಿಂದ ಇರುವುದರಲ್ಲಿಯೇ ಸ್ಪಷ್ಟವಾದ ಫೋಟೋವನ್ನು ಬಿಡುಗಡೆ ಮಾಡಲಾಗಿದೆ.
ರಾಷ್ಟ್ರೀಯ ತನಿಖಾ ದಳದಿಂದ ಸಾಮಾಜಿಕ ಜಾಲತಾಣದ ಎಕ್ಸ್ನಲ್ಲಿ ಶಂಕಿತ ಉಗ್ರ ಬಳ್ಳಾರಿಯಲ್ಲಿ ಸಂಚಾರ ಮಾಡಿದ 4 ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.
ಎನ್ಐಎ, ಆರೋಪಿ ಪತ್ತೆಗಾಗಿ ಸಾರ್ವಜನಿಕರ ಸಹಕಾರಕ್ಕಾಗಿ ಪೋಟೋ ರಿಲೀಸ್ ಮಾಡಲಾಗಿದ್ದು, ಈ ವ್ಯಕ್ತಿಯ ಸುಳಿವು ಸಿಕ್ಕಲ್ಲಿ 08029510900, 8904241100 ಕರೆ ಮಾಡಿ ಅಥವಾ info.blr.nia@gov.in ಗೆ ಇಮೇಲ್ ಮಾಡುವಂತೆ ಮನವಿ ಮಾಡಲಾಗಿದೆ.