
ಬೆಂಗಳೂರಿನಲ್ಲಿ ಶನಿವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರಿನಲ್ಲಿ ಮತ್ತೊಂದು ಕ್ಯಾಂಟರ್ ದುರಂತ: ಆಟೋಗೆ ಡಿಕ್ಕಿ, ಇಬ್ಬರ ಸಾವು
ಮೃತರನ್ನು ಡಿಯೇಸು ಮತ್ತು ಜನಿಫರ್ ಎಂದು ಗುರುತಿಸಲಾಗಿದೆ. ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಎರಡು ತುಂಡಾಗಿದೆ.
ಹಾಸನದಲ್ಲಿ ನಡೆದ ಭೀಕರ ಕ್ಯಾಂಟರ್ ದುರಂತದ ನಡೆದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಸುಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಕ್ಯಾಂಟರ್ ಲಾರಿಯೊಂದು ಆಟೋ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಡಿಯೇಸು ಮತ್ತು ಜನಿಫರ್ ಎಂದು ಗುರುತಿಸಲಾಗಿದೆ. ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಎರಡು ತುಂಡಾಗಿದೆ. ಕಾರಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯ ಬ್ರೇಕ್ ವೈಫಲ್ಯದಿಂದ ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಶುಕ್ರವಾರವಷ್ಟೇ ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಕ್ಯಾಂಟರ್ ಹರಿದು 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಈ ದುರ್ಘಟನೆ ನಡೆದಿದೆ.
Next Story