ಬಂಟ್ವಾಳ ಸಮೀಪ ಕಾರು ಅಪಘಾತ; ಬೆಂಗಳೂರಿನ ಮೂವರು ಸಾವು
x
ಬಂಟ್ವಾಳದಲ್ಲಿ ಕಾರು ಅಪಘಾತಕ್ಕೊಳಗಾಗಿರುವುದು

ಬಂಟ್ವಾಳ ಸಮೀಪ ಕಾರು ಅಪಘಾತ; ಬೆಂಗಳೂರಿನ ಮೂವರು ಸಾವು

ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ವೃತ್ತದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಮ್ಯ(23), ರವಿ(64) ಹಾಗೂ ನಂಜಮ್ಮ(75) ಮೃತರು. ಮೃತರನ್ನು ಬೆಂಗಳೂರಿನ ಪೀಣ್ಯದವರು ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡ್ ವೃತ್ತದಲ್ಲಿ ಇನ್ನೋವಾ ಕಾರು ಎನ್.ಜಿ.ಸರ್ಕಲ್ಗೆ ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಉಡುಪಿಯ ಶ್ರೀಕೃಷ್ಣ ಮಠಕ್ಕೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿ.ಸಿ.ರೋಡ್ - ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ ವೃತ್ತವು ಅವೈಜ್ಞಾನಿಕವಾಗಿದ್ದು ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
Next Story