Kalaburagi Accident: ಕಾರು ಅಪಘಾತ; ಮಗು ಸೇರಿ ಮೂವರು ದುರ್ಮರಣ
x

ಚಿತ್ರ(ಎಕ್ಸ್‌ ಖಾತೆಯಿಂದ)

Kalaburagi Accident: ಕಾರು ಅಪಘಾತ; ಮಗು ಸೇರಿ ಮೂವರು ದುರ್ಮರಣ

ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಸಂಬಂಧಿಕರ ಕೇಶ ಮುಂಡನ ಕಾರ್ಯಕ್ರಮಕ್ಕೆ ತೆರಳುವಾಗ ಕಲಬುರಗಿ ಸಮೀಪ ನಾಯಿ ಅಡ್ಡಬಂದ ಕಾರಣ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.


ರಸ್ತೆಯಲ್ಲಿ ಅಡ್ಡಬಂದ ನಾಯಿಯನ್ನು ಉಳಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಎರಡು ವರ್ಷದ ಮಗು ಸೇರಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಅಫಜಲಪುರ ತಾಲೂಕಿನ ಗೊಬ್ಬೂರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಮೃತರನ್ನು ಕಲಬುರಗಿಯ ಮಿಲ್ಲತ್‌ ನಗರದ ನಿವಾಸಿಗಳಾದ ಆಯಿಷಾ (70), ಅಜ್ಮೇರಾ (30) ಹಾಗೂ ಜೈನಬ್‌(2) ಎಂದು ಗುರುತಿಸಲಾಗಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿರುವ ಹೈದ್ರಾ ದರ್ಗಾದಲ್ಲಿ ಆಯಿಷಾ ಸಂಬಂಧಿಕರ ಮಗುವಿನ ಕೇಶ ಮುಂಡನ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬೀದಿನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ದೇವಲ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

Read More
Next Story