ಸಿಎಂ ಸರ್ಕಾರಿ ನಿವಾಸದ ಬಳಿ ಹೊತ್ತಿ ಉರಿದ ಕಾರು; ಆತಂಕ ಸೃಷ್ಟಿಸಿದ ಘಟನೆ
x

ಸಿಎಂ ಸರ್ಕಾರಿ ನಿವಾಸದ ಬಳಿ ಹೊತ್ತಿ ಉರಿದ ಕಾರು; ಆತಂಕ ಸೃಷ್ಟಿಸಿದ ಘಟನೆ

ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ಅವರು ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕು ಹೊತ್ತಿ ಉರಿಯುತ್ತಿತ್ತು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಸಮೀಪವೇ ಪಾರ್ಕಿಂಗ್‌ ಮಾಡಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾಗಿ ಹೊತ್ತಿ ಉರಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ಅವರು ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕು ಹೊತ್ತಿ ಉರಿಯುತ್ತಿತ್ತು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಸಮಯಕ್ಕೆ ಸರಿಯಾಗಿ ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಉರಿದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ರಸ್ತೆಯಲ್ಲಿ ಕೆಲ ಕಾಲ ವಾಹನ ದಟ್ಟಣೆ ಉಂಟಾಗಿ, ಸವಾರರು ಪರದಾಡಿದರು.

ಕಾರಿನ ಒಳಗೆ ಬ್ಯಾಟರಿ ಸ್ಫೋಟ ಅಥವಾ ಶಾರ್ಟ್ ಸರ್ಕೀಟ್‌ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಕಾರು ಯಾರಿಗೆ ಸೇರಿದ್ದು, ಯಾವಾಗ ಪಾರ್ಕಿಂಗ್‌ ಮಾಡಲಾಗಿತ್ತು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

2018ರಲ್ಲಿ ಕಾವೇರಿ ನಿವಾಸದ ಪಕ್ಕದ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ತಗುಲಿ, ಹೊತ್ತಿ ಉರಿದಿತ್ತು. 2023ರಲ್ಲಿ ಬೆಂಗಳೂರಿನ ವಸತಿ ಪ್ರದೇಶದಲ್ಲಿ ಕಾರೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿತ್ತು.

Read More
Next Story