ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​:
x
ಯತ್ನಾಳ್​, ತೇಜಸ್ವಿ ಸೂರ್ಯ

ಯತ್ನಾಳ್​, ತೇಜಸ್ವಿ ಸೂರ್ಯ ವಿರುದ್ಧದ ಕೇಸ್​ ರದ್ದುಗೊಳಿಸಿದ ಹೈಕೋರ್ಟ್​:

ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತೇಜಸ್ವಿ ಸೂರ್ಯ ಟ್ವೀಟ್​ ಮಾಡಿದ್ದರು. ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದರು.


Click the Play button to hear this message in audio format

ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ (ಡಿಸೆಂಬರ್ 12) ರದ್ದುಗೊಳಿಸಿದೆ.

ಎಫ್​ಐಆರ್​ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಗುರುವಾರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಆದೇಶವನ್ನು ಹೊರಡಿಸಿದ್ದು, ಪ್ರಕರಣವನ್ನು ರದ್ದುಗೊಳಿಸಲಾಗಿದೆ.

ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತೇಜಸ್ವಿ ಸೂರ್ಯ ಟ್ವೀಟ್​ ಮಾಡಿದ್ದರು. ಮೃತ ರೈತನ‌ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಪ್ರಕರಣ ರದ್ದುಪಡಿಸುವಂತೆ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದಾರೆ.

ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಬಳಿಕ ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು.

Read More
Next Story