
ಜಾತಿಗಣತಿ: ಸಮೀಕ್ಷೆಯ ಅವಧಿ ವಿಸ್ತರಣೆ ಸಾಧ್ಯತೆ, ಇಂದು ಅಂತಿಮ ತೀರ್ಮಾನ
ಕೆಲವು ತಾಲೂಕುಗಳಲ್ಲಿ ಈಗಾಗಲೇ ಸಮೀಕ್ಷೆ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಆದರೆ, ರಾಜಧಾನಿ ಬೆಂಗಳೂರಿನಲ್ಲಿ ಸಮೀಕ್ಷೆಯು ತಡವಾಗಿ ಆರಂಭವಾಗಿದ್ದರಿಂದ, ಇಲ್ಲಿ ಇನ್ನೂ ಕನಿಷ್ಠ 15 ದಿನಗಳ ಕಾಲ ಸಮೀಕ್ಷೆ ಮುಂದುವರಿಯಲಿದೆ.
ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿಗಣತಿ) ನಿಗದಿತ ಅವಧಿಯು ನಾಳೆ, ಅಕ್ಟೋಬರ್ 7ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ, ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವ ಬಗ್ಗೆ ಇಂದು ಮಹತ್ವದ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ.
ಸೆಪ್ಟೆಂಬರ್ 22ರಂದು ಆರಂಭವಾದ ಈ ಸಮೀಕ್ಷೆಯು ರಾಜ್ಯದ ಬಹುತೇಕ ಕಡೆಗಳಲ್ಲಿ ಅಂತಿಮ ಹಂತ ತಲುಪಿದೆ. ಬೆಂಗಳೂರು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಶೇ. 90ರಷ್ಟು ಸಮೀಕ್ಷಾ ಕಾರ್ಯವು ಭಾನುವಾರಕ್ಕೇ ಪೂರ್ಣಗೊಂಡಿದೆ. ಕೆಲವು ತಾಲೂಕುಗಳಲ್ಲಿ ಈಗಾಗಲೇ ಸಮೀಕ್ಷೆ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಆದರೆ, ರಾಜಧಾನಿ ಬೆಂಗಳೂರಿನಲ್ಲಿ ಸಮೀಕ್ಷೆಯು ತಡವಾಗಿ ಆರಂಭವಾಗಿದ್ದರಿಂದ, ಇಲ್ಲಿ ಇನ್ನೂ ಕನಿಷ್ಠ 15 ದಿನಗಳ ಕಾಲ ಸಮೀಕ್ಷೆ ಮುಂದುವರಿಯಲಿದೆ.
"ಇಂದು ಮತ್ತು ನಾಳೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆಯ ಅವಧಿಯನ್ನು ವಿಸ್ತರಿಸಬೇಕೇ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಹಿಂದುಳಿದ ವರ್ಗಗಳ ಆಯೋಗದ ಮೂಲಗಳು ತಿಳಿಸಿವೆ. ಇಂದು ಸಂಜೆಯೊಳಗೆ ಸಮೀಕ್ಷೆಯ ಪ್ರಗತಿಯನ್ನು ಅವಲೋಕಿಸಿ, ಆಯೋಗದ ಅಧ್ಯಕ್ಷರು ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ರಾಜ್ಯಾದ್ಯಂತ ಸಮೀCಕ್ಷೆಯನ್ನು ಪೂರ್ಣಗೊಳಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ನೀಡುವ ಸಾಧ್ಯತೆಯಿದೆ.