ಕೇಂದ್ರದ ಬರ ಪರಿಹಾರ ಹಣ ಸಾಲಕ್ಕೆ ಜಮಾ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
ಕೇಂದ್ರ ಸರ್ಕಾರದಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ʻʻಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯʼʼ ಎಂದಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ @INCKarnataka ಸರಕಾರ ಕೈಕಟ್ಟಿ ಕೂತಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 16, 2024
•ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ…
ʻʻಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ. ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕುʼʼ ಎಂದು ಆಗ್ರಹಿಸಿದ್ದಾರೆ.