ಚಾಮರಾಜನಗರದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರು ಬಾಲಕರ ದುರ್ಮರಣ
x

ಚಾಮರಾಜನಗರದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರು ಬಾಲಕರ ದುರ್ಮರಣ

ವಿಷಯ ತಿಳಿದ ತಕ್ಷಣ ಶಾಸಕ ಸಿ.ಪುಟ್ಟರಂಗಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.


ಚಾಮರಾಜನಗರದ ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ ಲಾರಿ, ಕಾರು ಮತ್ತು ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಇಡೀ ನಗರವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.

ಮೊಪೆಡ್‌ನಲ್ಲಿ ಪ್ರಯಾಣಿಸುತ್ತಿದ್ದ ಮೆರಾನ್, ರೆಹಾನ್, ಆದಾನ್ ಪಾಷಾ ಮತ್ತು ಫೈಜಲ್ ಎಂಬ ನಾಲ್ವರು ಬಾಲಕರು ಈ ದುರ್ಘಟನೆಯಲ್ಲಿ ಬಲಿಯಾಗಿದ್ದಾರೆ. ಅಪಘಾತದ ರಭಸಕ್ಕೆ ಮೆರಾನ್ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಉಳಿದ ಮೂವರನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಮತ್ತು ಜೆಎಸ್‌ಎಸ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಮೂವರೂ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದ ತಕ್ಷಣ ಶಾಸಕ ಸಿ.ಪುಟ್ಟರಂಗಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹನುಮಂತ ಉಪ್ಪಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More
Next Story