ಅಪಘಾತಕ್ಕೀಡಾಗಿರುವ ಖಾಸಗಿ ಬಸ್
ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ; ಚಾಲಕ ಗಂಭೀರ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೆಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಲಾರಿ ಮತ್ತು ಖಾಸಗಿ ಬಸ್ ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಭಾನುವಾರ (ಡಿ. 28) ಮುಂಜಾನೆ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಖಾಸಗಿ ಬಸ್‌ನ ಚಾಲಕನ ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಲಾರಿ ಮತ್ತು ಖಾಸಗಿ ಬಸ್ ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಪಘಾತದಲ್ಲಿ ಗಾಯಗೊಂಡವರ ಪೈಕಿ 13 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನಿಗೆ ತೀವ್ರ ಪೆಟ್ಟಾಗಿದ್ದು, ಅವರ ಪ್ರಾಣಾಪಾಯದಿಂದ ಪಾರಾಗಲು ವೈದ್ಯರು ಪ್ರಯತ್ನಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಈ ಸಂಬಂಧ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.