Actor Darshan Case | ಶೀಘ್ರವೇ ದರ್ಶನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ: ನಗರ ಪೊಲೀಸ್ ಆಯುಕ್ತ ದಯಾನಂದ್
x
ನಗರ ಪೊಲೀಸ್ ಆಯುಕ್ತ ದಯಾನಂದ್

Actor Darshan Case | ಶೀಘ್ರವೇ ದರ್ಶನ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ: ನಗರ ಪೊಲೀಸ್ ಆಯುಕ್ತ ದಯಾನಂದ್

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿದ್ದು, ಶೀಘ್ರವೇ ನಟ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎಂದು ಆಯುಕ್ತರು ಹೇಳಿದ್ದಾರೆ.


Click the Play button to hear this message in audio format

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ತನಿಖೆ ಪೂರ್ಣಗೊಳಿಸಿದ್ದು, ಶೀಘ್ರವೇ ನಟ ದರ್ಶನ್ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ನಗರ ಪೊಲೀಸ್ ಆಯುಕ್ತ ದಯಾನಂದ್, ‘ಪ್ರಕರಣದಲ್ಲಿ ನಮ್ಮ ತನಿಖೆ ಪೂರ್ಣಗೊಂಡಿದ್ದು, ಚಾರ್ಜ್ ಶೀಟ್ ಈಗಾಗಲೇ ತಯಾರಾಗಿದೆ. ಆರೋಪ ಪಟ್ಟಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್​ ಅವರಿಗೆ ನೀಡಿ ಸಲಹೆಗಳನ್ನು ಪಡೆಯಲಾಗಿದ್ದು, ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಆ ಬದಲಾವಣೆಗಳ ಬಳಿಕ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ’ ಎಂದಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಕೆಲವು ವರದಿಗಳು ಬರಬೇಕಿವೆ. ಬೆಂಗಳೂರಿನ ಎಲ್ಲ ಎಫ್​ಎಸ್​ಎಲ್​ ವರದಿಗಳು ಈಗಾಗಲೇ ಕೈ ಸೇರಿವೆ. ಹೈದರಾಬಾದ್​ನ ಎಫ್​ಎಸ್​ಎಲ್​ನಿಂದ ಕೆಲವು ವರದಿಗಳು ಬರಬೇಕಿವೆ. ಆದರೆ ಅವರುಗಳ ಹೊರತಾಗಿಯೇ ನಾವು ವರದಿ ಸಲ್ಲಿಕೆ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ಅವುಗಳನ್ನು ಸೇರಿಸುವ ಅವಕಾಶ ಇದೆ. ಈಗ ನಾವು ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ವಿವರವಾಗಿ ತನಿಖೆ ಮಾಡಿದ್ದಾರೆ. ಸುಮಾರು 100 ಕ್ಕೂ ಹೆಚ್ಚು ಭೌತಿಕ ಸಾಕ್ಷ್ಯ ಕಲೆ ಹಾಕಿದ್ದಾರೆ. ಬೆಂಗಳೂರು, ಮೈಸೂರು, ಚಿತ್ರದುರ್ಗದ ಹಲವು ಕಡೆ ಮಹಜರು ಮಾಡಿದ್ದಾರೆ. ಹಲವಾರು ಸಿಸಿಟಿವಿ ಪರಿಶೀಲನೆ ನಡೆಸಿ ದೃಶ್ಯಗಳನ್ನು ಸಂಗ್ರಹ ಮಾಡಿದ್ದಾರೆ. 100ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿ ಹಲವರ ಹೇಳಿಕೆಗಳನ್ನು ಸಂಗ್ರಹಿಸಿದ್ದಾರೆ. ಎಲ್ಲವನ್ನೂ ಚಾರ್ಜ್​ ಶೀಟ್​ನಲ್ಲಿ ನಮೂದಿಸಲಿದ್ದು, ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಪ್ರಸ್ತುತ ವಿಚಾರಣಾಧೀನ ಕೈದಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ.

Read More
Next Story