ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ನಗರ ಅಭಿವೃದ್ಧಿ ಕುರಿತು ನಗರದ ಸಚಿವರು ಹಾಗೂ ಶಾಸಕರ ಜೊತೆ ಹಾಗೂ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರು ನಗರ ಅಭಿವೃದ್ಧಿ ಕುರಿತು ನಗರದ ಸಚಿವರು ಹಾಗೂ ಶಾಸಕರ ಜೊತೆ ಹಾಗೂ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ಪೆರಿಫೆರಲ್ ರಿಂಗ್ ರಸ್ತೆ, sky deck ನಿರ್ಮಾಣ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ಬೆಂಗಳೂರು ನಗರದ ಸಂಚಾರದಟ್ಟಣೆ ನಿವಾರಣೆಗಾಗಿ ಟನೆಲ್ ರಸ್ತೆ ನಿರ್ಮಾಣ ಹಾಗೂ ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ನಾಲ್ಕೈದು ಬಾರಿ ಟೆಂಡರ್ ಕರೆದರು ವಿಫಲವಾಗಿರುವುದರಿಂದ ಪರಿಸರಲ್ ರಿಂಗ್ ರಸ್ತೆ ಅಭಿವೃದ್ಧಿಗೆ ವಿವಿಧ ಸಾಧ್ಯತೆಗಳು ಹಾಗೂ ಸಂಪನ್ಮೂಲ ಕ್ರೋಡೀಕರಣ ದ ಅವಕಾಶಗಳನ್ನು ಪರಿಶೀಲಿಸಿ ವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸೂಚಿಸಿದರು ಇದಲ್ಲದೆ ನಗರದಲ್ಲಿ ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ ಹಾಗೂ ಆಯವ್ಯಯದಲ್ಲಿ ಘೋಷಿಸಿದಂತೆ ಸಂಚಾರ ದಟ್ಟಣೆ ನಿವಾರಣೆಗೆ ಟನೆಲ್ ರಸ್ತೆಗಳ ನಿರ್ಮಾಣ ಅಭಿವೃದ್ಧಿ ಹಾಗೂ ರಾಜಕಾಲುವೆಗಳ ಬಫರ್ ಜೋನ್ ನಲ್ಲಿ ರಸ್ತೆಗಳ ನಿರ್ಮಾಣ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ನಗರದ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ ಜೆ ಚಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್ ದಿನೇಶ್ ಗುಂಡೂರಾವ್ ಮೊದಲಾದವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌. ಕೆ. ಅತೀಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Read More
Next Story