Chikkaballapur | ರಸ್ತೆ ನಿರ್ಮಾಣ ವಿಚಾರದಲ್ಲಿ ಘರ್ಷಣೆ; ವಿಧಾನ ಪರಿಷತ್ ಮಾಜಿ ಸದಸ್ಯರ ಸಂಬಂಧಿಯಿಂದ ಗುಂಡೇಟು
ಗುಂಡು ಹಾರಿಸಿದ ಸಕಲೇಶ್‌ಕುಮಾರ್ ಮಾಜಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಎಂದು ತಿಳಿದು ಬಂದಿದೆ. ಪಿಸ್ತೂಲಿನಿಂದ ಹಾರಿದ ಗುಂಡು ಚಿಕನ್ ರವಿ ಎಂಬವರ ತೊಡೆಯನ್ನು ಸೀಳಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕಲ್ಲು ಕ್ವಾರಿಗೆ ದಾರಿ ನಿರ್ಮಿಸುವ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆ ವೇಳೆ ಸಕಲೇಶಕುಮಾರ್ ಎಂಬಾತ ಪ್ರತಿಭಟನಾನಿರತ ವ್ಯಕ್ತಿಯ ಮೇಲೆ ಪಿಸ್ತೂಲಿನಿಂದ ಗುಂಡು ಹಾರಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗುಂಡು ಹಾರಿಸಿದ ಸಕಲೇಶ್‌ಕುಮಾರ್ ಮಾಜಿ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಎಂದು ತಿಳಿದು ಬಂದಿದೆ. ಪಿಸ್ತೂಲಿನಿಂದ ಹಾರಿದ ಗುಂಡು ಚಿಕನ್ ರವಿ ಎಂಬವರ ತೊಡೆಯನ್ನು ಸೀಳಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬುಧವಾರ ಮಂಚೇನಹಳ್ಳಿ ಹೊರವಲಯದಲ್ಲಿ ಸಕಲೇಶ ಕುಮಾರ್ ಕಲ್ಲು ಕ್ವಾರಿಗೆ ರಸ್ತೆ ನಿರ್ಮಿಸಲು ಸಿದ್ಧತೆ ನಡೆಸುತ್ತಿದ್ದರು. ಆಗ ಅಲ್ಲಿಗೆ ಬಂದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಆರಂಭವಾಗಿದ್ದು, ಚಿಕನ್ ರವಿ ಹಾಗೂ ಸಕಲೇಶ್ ಕುಮಾರ್ ಮಧ್ಯೆ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಈ ವೇಳೆ ಸಕಲೇಶಕುಮಾರ್ ತಲೆಗೆ ಪೆಟ್ಟು ಬಿದ್ದು, ರಕ್ತ ಸೋರಿದೆ. ಅಲ್ಲದೆ, ಸಕಲೇಶ್‌ಕುಮಾರ್ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಚಿಕನ್ ರವಿ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ರವಿ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.