
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಚಿತ್ರದುರ್ಗ ರಸ್ತೆ ದುರಂತ|ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಒಂಬತ್ತು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಭೀಕರ ಅಪಘಾತದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತಕ್ಕೂ ಹೆಚ್ಚು ಪ್ರಯಾಣಿಕರು ಬೆಂಕಿಗಾಹುತಿಯಾಗಿರುವ ಘೋರ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಯೊಂದು ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.
ಈ ಹೃದಯವಿದ್ರಾವಕ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿಗಳ ತುರ್ತು ಪರಿಹಾರವನ್ನು ಘೋಷಿಸಿದ್ದಾರೆ. ಅಪಘಾತದ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಸಂತಾಪ ಸೂಚಿಸಿರುವ ಅವರು, "ಊರಿಗೆ ಮರಳುತ್ತಿದ್ದವರ ಬದುಕು ಹೀಗೆ ದಾರಿಯಲ್ಲೇ ದುರಂತವಾಗಿ ಕೊನೆಗೊಂಡಿರುವುದು ಎದೆ ನಡುಗಿಸುವಂತಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ" ಎಂದು ಪ್ರಾರ್ಥಿಸಿದ್ದಾರೆ.
ಘಟನೆ ನಡೆದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ನಿರ್ಲಕ್ಷ್ಯ ತೋರಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದೆ. ಸದ್ಯ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾಡಳಿತವು ಸ್ಥಳದಲ್ಲಿ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದೆ.

