Karwara News | ಕಾರ್ಖಾನೆಯಲ್ಲಿ ಕ್ಲೋರಿನ್ ಸೋರಿಕೆ; 18 ಕಾರ್ಮಿಕರು ಅಸ್ವಸ್ಥ
x
ಕ್ಲೋರಿನ್ ಸೋರಿಕೆಯಾಗಿ 18 ಜನ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

Karwara News | ಕಾರ್ಖಾನೆಯಲ್ಲಿ ಕ್ಲೋರಿನ್ ಸೋರಿಕೆ; 18 ಕಾರ್ಮಿಕರು ಅಸ್ವಸ್ಥ

'ಕ್ಲೋರಿನ್ ಅನಿಲ ಸೋರಿಕೆಯಿಂದ ಅಸ್ವಸ್ಥಗೊಂಡ ಕಾರ್ಮಿಕರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ' ಎಂದು ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕ್ಯಾಪ್ಟನ್ ರಮೇಶ ರಾವ್ ಅವರು ತಿಳಿಸಿದ್ದಾರೆ.


ಸೋಡಾ ಉತ್ಪಾದನಾ ಘಟಕದಲ್ಲಿ ಶನಿವಾರ ರಾಸಾಯನಿಕ ಸೋರಿಕೆಯಾಗಿ 18 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕಾರಾವಾರ ಜಿಲ್ಲೆಯ ಬಿಣಗಾದಲ್ಲಿರುವ ಆದಿತ್ಯ ಬಿರ್ಲಾ ಗ್ರೂಪ್‌ಗೆ'ಗೆ ಸೇರಿರುವ `ಗ್ರಾಸಿಮ್ ಇಂಡಸ್ಟ್ರೀಸ್'ನ ಕಾಸ್ಟಿಕ್ ಸೋಡಾ ಉತ್ಪಾದನಾ ಘಟಕದಲ್ಲಿ ನಡೆದಿದೆ.

ನೀಲಕಂಠ (22), ಜಹಾನೂರ (20), ಕಮಲೇಶ ವರ್ಮಾ (22), ನಂದಕಿಶೋರ (21), ದೀಪು (28), ಅಜೀಜ್ (23), ಕಲ್ಲು (37), ಸುಜನ್ (26), ನಜೀದುಲ್ಲಾ (24), ಬೇಜನಕುಮಾರ್ (27), ಕಿಶನ್ ಕುಮಾರ್ (28), ಮೋಹಿತ್ ವರ್ಮಾ (21) ಹಾಗೂ ಇತರ ಆರು ಮಂದಿ ಅಸ್ವಸ್ಥಗೊಂಡರು. ಅವರ ಪೈಕಿ ನಾಲ್ವರಿಗೆ ಕಂಪನಿಯ ಆವರಣದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. 14 ಮಂದಿಯನ್ನು ಕ್ರಿಮ್ಸ್'ಗೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.

ಶನಿವಾರ ಮಧ್ಯಾಹ್ನದ ವೇಳೆ ಕಾರ್ಖಾನೆಯಲ್ಲಿ ವಿದ್ಯುತ್ ಸಮಸ್ಯೆಯಿಂದ ಕ್ಲೋರಿನ್ ಸ್ಟೋರ್‌ನಲ್ಲಿ ಲೀಕ್ ಆಗಿದೆ. ಇದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ 18 ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರು ಕರ್ನಾಟಕ, ಉತ್ತರಪ್ರದೇಶ, ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. 'ಕ್ಲೋರಿನ್ ಅನಿಲ ಸೋರಿಕೆಯಿಂದ ಅಸ್ವಸ್ಥಗೊಂಡ ಕಾರ್ಮಿಕರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ' ಎಂದು ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕ್ಯಾಪ್ಟನ್ ರಮೇಶ ರಾವ್ ಅವರು ತಿಳಿಸಿದ್ದಾರೆ.

ಕಾರ್ಮಿಕರು ಅಸ್ವಸ್ಥಗೊಂಡ ವಿಷಯ ತಿಳಿದ ಬಿಣಗಾ ಗ್ರಾಮಸ್ಥರು ಕಂಪನಿಯ ಆವರಣದಲ್ಲಿ ಸೇರಿದರು. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಕಂಪನಿಯು ನಿರ್ಲಕ್ಷವಹಿಸುತ್ತಿದೆ. ಕೆಲ ದಿನಗಳ ಹಿಂದಷ್ಟೆ ಕಂಪನಿಯಲ್ಲಿ ರಾಸಾಯನಿಕ ಸೋರಿಕೆಯಾಗಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದರು. ಇನ್ನೂ ಎಚ್ಚರಿಕೆ ವಹಿಸಿಲ್ಲ ಎಂದು ಆರೋಪಿಸಿದರು.

ಕಳೆದ ಕೆಲ‌ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದ ಕಾರ್ಮಿಕನೋರ್ವ ಮೃತಪಟ್ಟಿದ್ದ ಘಟನೆ ನಡೆದಿತ್ತು. ಈ ಬೆನ್ನಲ್ಲೇ ಇದೀಗ ಮತ್ತೆ ರಾಸಾಯನಿಕ ಸೋರಿಕೆಯಾಗಿದೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More
Next Story