ಉಮಾಶ್ರೀ ಮುಡಿಯೇರಿದ ಡಾ. ರಾಜ್‌ಕುಮಾರ್ ಪ್ರಶಸ್ತಿ; ರಿಚರ್ಡ್ ಕ್ಯಾಸ್ಟಲಿನೋಗೆ ಡಾ. ವಿಷ್ಣುವರ್ಧನ್ ಪ್ರಶಸ್ತಿ
2019ನೇ ಸಾಲಿನ ಡಾ. ರಾಜ್‌ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗೂ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಮತ್ತು ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದೆ.
2019ನೇ ಸಾಲಿನ ಡಾ. ರಾಜ್‌ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗೂ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಮತ್ತು ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ಸರ್ಕಾರ ಘೋಷಿಸಿದೆ.
ಡಾ. ರಾಜ್‌ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಉಮಾಶ್ರೀ ಅವರಿಗೆ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಚಲನಚಿತ್ರ ನಿರ್ದೇಶಕ ಎನ್.ಅರ್. ನಂಜುಂಡೇಗೌಡ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಸಿನಿಮಾ ನಿರ್ಮಾಪಕ ಹಾಗೂ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಅಐಕೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದ. ಈ ಪ್ರಶಸ್ತಿಗಳು ತಲಾ 5 ಲಕ್ಷ ರೂಪಾಯಿ ನಗದು ಹಾಘೂ 50 ಗ್ರಾಂ ಚಿನ್ನದ ಪದಕವನ್ನು ಹೊಂದಿದೆ.
2019ನೇ ಸಾಲಿನ ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿಯನ್ನು ಬೆಳ್ಳಿತೊರೆ-ಸನಿಮಾ ಪ್ರಬಂಧಗಳು ಎನ್ನುವ ಕೃತಿಗಾಗಿ ಲೇಖಕ ರಘುನಾಥ ಚ.ಹ. ಮತ್ತು ಪ್ರಕಾಶಕ ಪ್ರಕಾಶ ಕಂಬತ್ತಳ್ಳಿ ಅವರಿಗೆ, ಅತ್ಯುತ್ತಮ ಕಿರುಚಿತ್ರ ಕ್ಕಾಗಿ ʼಗುಳೆʼ ಸಿನಿಮಾವನ್ನು ಆಯ್ಕೆ ಮಾಡಲಾಗಿದ್ದು ನಿರ್ಮಾಪಕ ಮನೋಹರ್ ಎಸ್ ಐಯ್ಯರ್ ಹಾಗೂ ನಿರ್ದೇಶಕ ಶ್ರೀನಾಥ್ ಎಸ್. ಹಡಗಲಿ ಅವರನ್ನು ಆಯ್ಕೆ ಮಾಡಲಾಗಿದೆ.