civic worker urban local bodies dies, Rs. 10 lakh compensation given dependents: CM
x

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸ್ವಚ್ಛತಾ ಯೋಧರಿಗೆ ಸರ್ಕಾರದ ರಕ್ಷೆ: ಮೃತಪಟ್ಟ ಪೌರ ಕಾರ್ಮಿಕರ ಕುಟುಂಬಕ್ಕೆ 10 ಲಕ್ಷ ರೂ. ನೆರವು

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2,992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನದಡಿ ಕೆಲಸ ನಿರ್ವಹಿಸುವ ಪೌರ ಕಾರ್ಮಿಕರು ಮೃತಪಟ್ಟರೆ ಅವರ ಅವಲಂಬಿತರಿಗೆ 10 ಲಕ್ಷ ರೂಪಾಯಿ ಪರಿಹಾರವನ್ನು ಸ್ಥಳೀಯ ಸಂಸ್ಥೆಗಳ ಸ್ವಂತ ಸಂಪನ್ಮೂಲದಿಂದ ಭರಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2,992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಪೌರ ಕಾರ್ಮಿಕರ ಬೇಡಿಕೆಗಳು

ರಾಜ್ಯದಲ್ಲಿರುವ 41,373 ಪೌರ ಕಾರ್ಮಿಕರ ಪೈಕಿ 29 ಸಾವಿರ ಮಂದಿಯ ಸೇವೆ ಖಾಯಂ ಮಾಡಲಾಗಿದ್ದು, ಬಾಕಿ ಉಳಿದಿರುವವರನ್ನು ಖಾಯಂ ಮಾಡಬೇಕು. 2023ರಲ್ಲಿ ಸರ್ಕಾರ 12,800 ಪೌರ ಕಾರ್ಮಿಕರ ಸೂಪರ್ ನ್ಯೂಮರಿ ಹುದ್ದೆಗಳನ್ನು ಮಂಜೂರು ಮಾಡಿದ್ದು, ಇವರಿಗೆ ಸೇವಾ ಭದ್ರತೆ ಇರುವುದಿಲ್ಲ. ಈ ಸೂಪರ್ ನ್ಯೂಮರಿ ಹುದ್ದೆಗಳನ್ನು ರದ್ದುಪಡಿಸಿ ಖಾಯಂ ಹುದ್ದೆ ಸೃಜಿಸಬೇಕು.

ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಒಳಚರಂಡಿ ಸಹಾಯಕ ಸ್ವಚ್ಛತಾ ಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿದ್ದು, ಇವರನ್ನು ಖಾಯಂ ಮಾಡಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ವೇತನದಡಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಮೃತಪಟ್ಟ ಪೌರ ಕಾರ್ಮಿಕರ ಅವಲಂಬಿತ ಕುಟುಂಬಗಳಿಗೆ ಅನುಕಂಪದ ಆಧಾರದಲ್ಲಿ ನೌಕರಿ ಹಾಗೂ ಪರಿಹಾರ ಒದಗಿಸಬೇಕು. ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯನ್ನು ನೇರ ಪಾವತಿ ಕಾರ್ಮಿಕರು ಸೇರಿದಂತೆ ಎಲ್ಲಾ ಸ್ವಚ್ಛತಾ ಕಾರ್ಮಿಕರಿಗೂ ವಿಸ್ತರಿಸಬೇಕು. ಪೌರ ಕಾರ್ಮಿಕರಿಗೆ ನಗದು ರಹಿತ ಆರೋಗ್ಯ ಕಾರ್ಡ್‌ಗಳನ್ನು ನೀಡಲು ಕ್ರಮಕೈಗೊಳ್ಳಬೇಕು ಎಂದು ಸಿಎಂಗೆ ಮನವಿ ಸಲ್ಲಿಸಿದರು.

Read More
Next Story