ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಪೊಲೀಸ್‌ ಇಲಾಖೆಯಲ್ಲಿ ಹುದ್ದೆ; ಸಿಎಂ ಭರವಸೆ
x
ಸಿಎಂ ಸಿದ್ದರಾಮಯ್ಯ ಅವರು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 14 ವರ್ಷದೊಳಗಿನ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು

ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಪೊಲೀಸ್‌ ಇಲಾಖೆಯಲ್ಲಿ ಹುದ್ದೆ; ಸಿಎಂ ಭರವಸೆ

ಪೊಲೀಸ್ ಇಲಾಖೆಯಲ್ಲಿ ಶೇ 3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ 2 ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪೊಲೀಸ್ ಇಲಾಖೆಯಲ್ಲಿ ಶೇ 3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ 2 ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ವತಿಯಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾಪಟುಗಳಿಗೆ ಉತ್ತಮ ನಗದು ಬಹುಮಾನ ನೀಡುತ್ತಿದೆ. ಇದರಿಂದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು.

ಸಚಿವರಾದ ರಾಮಲಿಂಗಾರೆಡ್ಡಿ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಶಾಸಕರಾದ ರಿಜ್ವಾನ್ ಅರ್ಷದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Read More
Next Story