ಉತ್ತರ ಕರ್ನಾಟಕ ನೆರೆ:  ಎನ್​​ಡಿಆರ್​ಎಫ್​ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್  ಘೋಷಿಸಿದ ಸಿಎಂ
x

ಉತ್ತರ ಕರ್ನಾಟಕ ನೆರೆ: ಎನ್​​ಡಿಆರ್​ಎಫ್​ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ

ಎನ್‌ಡಿಆರ್‌ಎಫ್‌ ಹಣ ಜತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ 8500 ರೂ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.


ಎನ್‌ಡಿಆರ್‌ಎಫ್‌ ಹಣ ಜತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ 8500 ರೂ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22,500 ರೂ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗಲಿದೆ. ರಾಜ್ಯ ಸರ್ಕಾರವು 8500 ರೂ ಹೆಚ್ಚುವರಿ ಪರಿಹಾರ ನೀಡಲಿದೆ. ಇದರಿಂದ ಕುಷ್ಕಿ ಜಮೀನಿಗೆ ಹೆಕ್ಟೇರ್ ಒಟ್ಟು 17 ಸಾವಿರ ರೂ. ಆಗಲಿದೆ. ನೀರಾವರಿ ಜಮೀನಿಗೆ 25500 ರೂ. ಆಗಲಿದೆ. ವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ 31 ಸಾವಿರ ರೂ. ಆಗಲಿದೆ ಎಂದು ಮಾಹಿತಿ ನೀಡಿದರು.

ಎನ್‌ಡಿಆರ್‌ಎಫ್‌ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ 2000-2500 ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡಲಾಗುವುದು. ಪ್ರವಾಹದಿಂದ ಬೆಳೆ ಜತೆಗೆ ಮೂಲಭೂತ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ನಾಲ್ಕು ಜಿಲ್ಲೆಗಳಲ್ಲಿ 117 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೃಷ್ಣ ನದಿಯಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವುದು ಹಾಗೂ ನಾಲ್ಕೂ ಜಿಲ್ಲೆಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ನಲ್ಲಿ ವಿಪರೀತ ಮಳೆ ಆಗಿರುವುದೂ ಸೇರಿ ಅನಾಹುತ ಮತ್ತು ಸಂಕಷ್ಟದ ಪ್ರಮಾಣದ ಹೆಚ್ಚಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಈ ಪ್ರಮಾಣ ಇನ್ನೂ ಹೆಚ್ಚು ಆಗಬಹುದು. ಜಂಟಿ ಸಮೀಕ್ಷೆ ಪೂರ್ಣ ಆದ ಬಳಿಕ ಸ್ಪಷ್ಟವಾಗಿ ಗೊತ್ತಾಗುತ್ತದೆ. ಸದ್ಯ 5 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಜಂಟಿ ಸಮೀಕ್ಷೆ ಮುಗಿದಿದೆ. ಸಮೀಕ್ಷೆ ಪೂರ್ಣಗೊಂಡ ತಕ್ಷಣ ಹಣ ಅವರ ಖಾತೆಗಳಿಗೆ ಹಣ ಹೋಗುತ್ತದೆ. ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೀದರ್, ರಾಯಚೂರು, ಗದಗ, ಕಲಬುರಗಿ, ಧಾರವಾಡ ಸೇರಿ 8 ಜಿಲ್ಲೆಗಳಲ್ಲಿ ಶೇ95 ರಷ್ಟು ಬೆಳೆ ಹಾನಿಯಾಗಿದೆ. ಕಳೆದ ವರ್ಷ ಶೇ.22 ರಷ್ಟು ಮಳೆ ಹೆಚ್ಚಾಗಿದೆ. ಈ ವರ್ಷ ಶೇ.26 ರಷ್ಟು ಹೆಚ್ವು ಮಳೆ ಬಿದ್ದು ವಾಡಿಕೆಗಿಂತ ವಿಪರೀತ ಹೆಚ್ಚಿನ ಮಳೆ ಬಿದ್ದಿದೆ ಎಂದರು.

9.60 ಲಕ್ಷ ಹೆಕ್ಟೇರುಗಳಷ್ಟು ಬೆಳೆ ಹಾನಿ:

ರಾಜ್ಯದಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು 9,60,578 ಹೆಕ್ಟೇರುಗಳಷ್ಟು ಬೆಳೆ ಹಾನಿಯಾಗಿದೆ. ಇದರಲ್ಲಿ 8,88,953 ಹೆಕ್ಟೇರುಗಳಷ್ಟು ಕೃಷಿ ಬೆಳೆಗಳು ಮತ್ತು 71624 ಹೆಕ್ಟೇರುಗಳಷ್ಟು ತೋಟಗಾರಿಕಾ ಬೆಳೆಗಳು ನಷ್ಟವಾಗಿದೆಯೆಂಬುದು ಅಂದಾಜಿಸಲಾಗಿದೆ. ಪೂರ್ಣ ಪ್ರಮಾಣದ ಸಮೀಕ್ಷೆಯ ನಂತರ ಈ ಪ್ರಮಾಣ ಹೆಚ್ಚೂ ಆಗಬಹುದು. ಉತ್ತರ ಕರ್ನಾಟಕದ ಈ 8 ಜಿಲ್ಲೆಗಳಲ್ಲಿಯೇ 903966 ಹೆಕ್ಟೇರುಗಳಷ್ಟು ಬೆಳೆಹಾನಿ ಸಂಭವಿಸಿದೆ. ಶೇ. 95 ರಷ್ಟು ಹಾನಿ ಈ ಜಿಲ್ಲೆಗಳಲ್ಲಿಯೇ ಸಂಭವಿಸಿದೆ. ಕಳೆದ ಎರಡು ತಿಂಗಳಿಂದ ನೆಲ ಒಣಗದಂತೆ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಣ ಹವೆಯ ಮೂಲಕ ಬೆಳೆಯುವ ಬೆಳೆಗಳಾದ ತೊಗರಿ, ಹತ್ತಿ, ಈರುಳ್ಳಿ ಮುಂತಾದ ಬೆಳೆಗಳನ್ನು ನಂಬಿ ರೈತರು ಬದುಕುತ್ತಾರೆ. ನಿರಂತರವಾಗಿ ಮಳೆ ಹಿಡಿದರೆ ಬೆಳೆಗಳು ಕೊಳೆಯಲಾರಂಭಿಸುತ್ತವೆ. ಈಗೀಗ ಮುಸುಕಿನ ಜೋಳ ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ. ಅವುಗಳೂ ಹಾನಿಯಾಗಿವೆ. ಅಧಿಕಾರಿಗಳು ರೈತರ ಭೂಮಿಗಳಿಗೆ ಹೋಗಿ ಸಮೀಕ್ಷೆ ಮಾಡಲಾಗದಷ್ಟು ತೇವಾಂಶ ಹೊಲಗಳಲ್ಲಿದೆ ಎಂದು ಹೇಳಿದರು.

52 ಮಂದಿ ಪ್ರಾಣ ಹಾನಿ

ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ‌ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ. ಗೋಡೆ ಕುಸಿದು 15 ಮಂದಿ, ನೀರಿನಲ್ಲಿ ಮುಳಗಿ ಅಥವಾ ಕೊಚ್ಚಿ ಹೋಗಿ 23 ಮಂದಿ ಮರಣ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. 547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.


Read More
Next Story