
Karnataka Budget 2025 | ಬೆಂಗಳೂರು ಟನಲ್ ರಸ್ತೆಗೆ 40 ಸಾವಿರ ಕೋಟಿ ರೂ. ಅನುದಾನ
ಸುರಂಗ ಮಾರ್ಗ ಯೋಜನೆಗಾಗಿ ರಾಜ್ಯ ಸರ್ಕಾರದಿಂದ 19 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು. ಉಳಿದ ಹಣವನ್ನು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಬೆಂಗಳೂರು ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗಾಗಿ ಉದ್ದೇಶಿತ ಟನಲ್ ರಸ್ತೆ (ಸುರಂಗ ಮಾರ್ಗ) ನಿರ್ಮಾಣಕ್ಕೆ 40 ಸಾವಿರ ಕೋಟಿ ಅನುದಾನ ಹಂಚಿಕೆ ಮಾಡಿದ್ದಾರೆ.
ಸುರಂಗ ಮಾರ್ಗ ಯೋಜನೆಗಾಗಿ ರಾಜ್ಯ ಸರ್ಕಾರದಿಂದ 19 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು. ಉಳಿದ ಹಣವನ್ನು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಯೋಜನೆ ಕುರಿತು ಡಿಪಿಆರ್ ಸಿದ್ಧವಾಗಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿಯೇ ಕಾಮಗಾರಿ ಆರಂಭವಾಗಲಿದೆ.
ಉತ್ತರ-ದಕ್ಷಿಣ ಮತ್ತು ಪೂರ್ವ- ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ ನಿರ್ಮಾಣ ಮಾಡಲು ಬಿಬಿಎಂಪಿಗೆ 40 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಸ್ತುತ, ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗಿನ 18 ಕಿ.ಮೀ ಉದ್ದದ ಸುರಂಗವನ್ನು 12,690 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲಾಗಿದೆ. ಮತ್ತೊಂದು ಸುರಂಗ ಮಾರ್ಗವು ಕೆ.ಆರ್ ಪುರದಿಂದ- ನಾಯಂಡಹಳ್ಳಿ ನಡುವೆ ನಿರ್ಮಾಣವಾಗಲಿದೆ. ಮೊದಲ ಹಂತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಿಎಂ ತಿಳಿಸಿದ್ದಾರೆ.