ಕನ್ನಡಿಗರಿಗೆ ಮೀಸಲಾತಿ| ಟ್ವೀಟ್ ಡಿಲೀಟ್‌ ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದ  ಸಿಎಂ ಸಿದ್ದರಾಮಯ್ಯ
x
ಸಿ.ಎಂ ಸಿದ್ದರಾಮಯ್ಯ

ಕನ್ನಡಿಗರಿಗೆ ಮೀಸಲಾತಿ| ಟ್ವೀಟ್ ಡಿಲೀಟ್‌ ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು.

ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು.

ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸಬೇಕು ಎಂಬ ಯೋಚನೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಸಿ.ಎಂ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್‌ ಅನ್ನು ಡಿಲೀಟ್‌ ಮಾಡಿದ್ದರು.

ಇದೀಗ ಸಿ.ಎಂ ಸಿದ್ದರಾಮಯ್ಯ, ಮತ್ತೆ ಟ್ವೀಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಟ್ವೀಟ್ ನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ಶೇ. 100 ರಷ್ಟು ಎನ್ನುವುದು ಇತ್ತು. ಆದರೆ ಬಿಲ್ ನಲ್ಲಿ, ಮ್ಯಾನೇಜ್ಮೆಂಟ್ ಕೋಟಾದಲ್ಲಿ 50% ನಾನ್ ಮ್ಯಾನೇಜ್ಮೆಂಟ್ ಕೋಟಾ 70% ಎಂಬ ನಿಯಮ ಇದೆ. ಹೀಗಾಗಿ ಸಿಎಂ ನೂರಕ್ಕೆ ನೂರರಷ್ಟು ಅನ್ನುವ ಪದ ಬಳಕೆ ಟ್ವೀಟ್ ನಲ್ಲಿ ಮಾಡಿದ್ದಕ್ಕೆ ಡಿಲೀಟ್ ಮಾಡಿದ್ದಾರೆ.

ಈ ಕುರಿತು ಮತ್ತೆ ಇಂದು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.

ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಮರು ಟ್ವೀಟ್‌ ಮಾಡಿದ್ದಾರೆ.

Read More
Next Story