
ಸಿ.ಎಂ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಲಬುರಗಿ ಜಿಲ್ಲೆಯಲ್ಲಿ ಬೆಳೆ ಹಾನಿಯ ವೈಮಾನಿಕ ಪರಿಶೀಲನೆ ನಡೆಸಿದ ಸಿ.ಎಂ ಸಿದ್ದರಾಮಯ್ಯ
ಕಲಬುರ್ಗಿ ವಿಮಾನ ನಿಲ್ದಾಣದಲ್ಲೇ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿದ ಸಿಎಂ, ಪ್ರವಾಹದಿಂದ ಉಂಟಾದ ಹಾನಿ ಹಾಗೂ ತುರ್ತು ಕ್ರಮಗಳ ಕುರಿತು ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.
ಭಾರೀ ಮಳೆಯ ಪರಿಣಾಮವಾಗಿ ಭೀಮಾ ಮತ್ತು ಕೃಷ್ಣಾ ನದಿಗಳು ಉಕ್ಕಿ ಹರಿಯುತ್ತಿದ್ದು, ಕಲ್ಯಾಣ ಕರ್ನಾಟಕದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.
ಕಲಬುರ್ಗಿ ವಿಮಾನ ನಿಲ್ದಾಣದಲ್ಲೇ ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿದ ಸಿಎಂ, ಪ್ರವಾಹದಿಂದ ಉಂಟಾದ ಹಾನಿ ಹಾಗೂ ತುರ್ತು ಕ್ರಮಗಳ ಕುರಿತು ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.
ಸಿ.ಎಂ ಅವರು ವೈಮಾನಿಕ ಸಮೀಕ್ಷೆ ಕುರಿತು ಬಿಜೆಪಿ ಟೀಕೆ ಮಾಡಿದ್ದು, “ಕೇರಳ ಹಾಗೂ ಹಿಮಾಚಲ ಪ್ರದೇಶದಲ್ಲಿ ಪ್ರವಾಹ-ಭೂಕುಸಿತ ಸಂಭವಿಸಿದಾಗ ತಕ್ಷಣ ಪರಿಹಾರ ಘೋಷಿಸಿದ್ದ ಸಿಎಂ, ಉತ್ತರ ಕರ್ನಾಟಕದಲ್ಲಿ ಮಾತ್ರ ವಿಳಂಬ ಮಾಡುತ್ತಿದ್ದಾರೆ. ಜನರ ಎದುರು ನಿಲ್ಲಲು ಭಯವಿದ್ದರಿಂದಲೇ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದೀರಾ?” ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.
ಮೊದಲು ಪರಿಹಾರ ಘೋಷಿಸಿ ನಂತರ ಸಮೀಕ್ಷೆ ನಡೆಸಬೇಕಿತ್ತು. ಇದು ಸಂಪೂರ್ಣ ಮುಟ್ಟಾಳರ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಟ್ಟಾಳರು ಅವರೇ. ನಮಗೆ ಆ ಪದವನ್ನು ಬಳಸಿ ಮಾತನಾಡುವ ಹಕ್ಕೇ ಇಲ್ಲಎಂದು ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರ್ನಾಟಕಕ್ಕೆ ಹರಿಯುವ ನದಿಗಳು ಅಪಾಯಕಾರಿ ಮಟ್ಟಕ್ಕೆ ಏರಿದ್ದು, ರಾಜ್ಯದ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ತೀವ್ರ ಪ್ರವಾಹ ಉಂಟಾಗಿದೆ. ಕೃಷ್ಣಾ ಮತ್ತು ಭೀಮಾ ನದಿಗಳ ನೀರಿನ ಏರಿಕೆಯಿಂದಾಗಿ ಹಳ್ಳಿಗಳು ಮುಳುಗಿ, ಬೆಳೆಗಳಿಗೆ ಹಾನಿಯಾಗಿ, ಪ್ರಮುಖ ಸೇತುವೆಗಳು ನಿರುಪಯುಕ್ತವಾಗಿ, ನೂರಾರು ವಾಹನಗಳು ಸಿಲುಕಿಕೊಂಡಿವೆ.
ಕಲಬುರಗಿ, ವಿಜಯಪುರ, ಬೀದರ್ ಮತ್ತು ಯಾದಗಿರಿ ಹೆಚ್ಚು ಹಾನಿಗೊಳಗಾದ ಜಲ್ಲೆಗಳಾಗಿದ್ದು, ಮನೆಗಳಿಗೆ ನೀರು ಅಪಾರ ಹಾನಿ ಉಂಟಾಗಿದೆ. ಮಹಾರಾಷ್ಟ್ರದ ಅಣೆಕಟ್ಟುಗಳ ಪ್ರವಾಹದ ಗೇಟ್‌ಗಳನ್ನುತೆರೆದಿದ್ದರಿಂದ ಸೇತುವೆಗಳು ಮತ್ತು ಕಲ್ವರ್ಟ್‌ಗಳು ಕೊಚ್ಚಿಹೋಗಿವೆ ಎಂದು ಮೂಲಗಳು ತಿಳಿಸಿವೆ.
ಸೋಮವಾರ ಬಿ.ವೈ. ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತ್ತು. ಈ ತಂಡದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶೈಲೇಂದ್ರ ಬೆಲ್ದಾಳೆ, ಪ್ರಭು ಚೌಹಾಣ್ ಮತ್ತು ಶರಣು ಸಲಗರ್ ಇದ್ದರು. ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ, ಮುಳುಗಿರುವ ಕೃಷಿ ಭೂಮಿಯನ್ನು ಪರಿಶೀಲಿಸಲು ನಾಯಕರು ಟ್ರ್ಯಾಕ್ಟರ್ ಸವಾರಿ ಮಾಡಿದರು, ನಂತರ ನೆಲಮಟ್ಟದ ಮೌಲ್ಯಮಾಪನಕ್ಕಾಗಿ ಕಲಬುರಗಿಯ ಹಳ್ಳಿಗಳಿಗೆ ಪ್ರಯಾಣಿಸಿದರು.