ಸಂಸತ್ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅಭಿನಂಧಿಸಿದ್ದಾರೆ.
ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅಭಿನಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯ ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.
ವಯನಾಡು ಕ್ಷೇತ್ರದಿಂದ ಭರ್ಜರಿ ಗೆಲುವ ದಾಖಲಿಸಿ ಮೊದಲ ಬಾರಿಗೆ ಪ್ರಿಯಾಂಕ ಗಾಂಧಿ ಸಂಸತ್ತು ಪ್ರವೇಶಿಸಿದ್ದಾರೆ. ಕೇರಳದ ʼಕಸುವು ಸೀರೆʼಯಲ್ಲಿ ಸಂಸತ್ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ ಈ ಉಡುಗೆಯಲ್ಲಿ ತಮ್ಮ ಅಜ್ಜಿ ಇಂದಿರಾ ಗಾಂಧಿಯನ್ನು ನೆನಪಿದ್ದರು. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಪ್ರಿಯಾಂಕಾ ಗಾಂಧಿ ಜಯ ಗಳಿಸಿದ್ದರು. ಈ ಮೂಲಕ ತಮ್ಮ ಸಹೋದರ ರಾಹುಲ್ ಅವರು ಗಳಿಸಿದ್ದ 3.5 ಲಕ್ಷ ಮತಗಳ ಗಡಿಯನ್ನೂ ಮೀರಿದ್ದಾರೆ.
ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಯಾಸೀರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿದ್ದಾರೆ.