Fight for the throne | CM-DCM cold war; Possibility of a new face: MP Bommai
x

ರಾಜ್ಯ ಸರ್ಕಾರದ ವಿರುದ್ಧ ನಡೆದ ಹೋರಾಟದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಗದ್ದುಗೆ ಗುದ್ದಾಟ| ಸಿಎಂ-ಡಿಸಿಎಂ ಕಚ್ಚಾಟದಲ್ಲಿ ಹೊಸ ಮುಖಕ್ಕೆ ಮಣೆ ಹಾಕುವ ಸಾಧ್ಯತೆ- ಸಂಸದ ಬೊಮ್ಮಾಯಿ

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.


Click the Play button to hear this message in audio format

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ರೀತಿ ಮುಂದುವರೆದರೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗುವ ಸಾಧ್ಯತೆ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ನಾಯಕರು ಇದನ್ನು ಬಗೆಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡಲಿದ್ದು, ಡಾರ್ಕ್ ಹಾರ್ಸ್ ರೇಸ್‌ಗೆ ಬರುವ ಸಾಧ್ಯತೆ ಇದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಶುಕ್ರವಾರ (ನ.28) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ತಿಳಿಸಿದರು.

ಡಿಸೆಂಬರ್ 8 ರವರೆಗೂ ಸಮಯವಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸಂಗ ಬರಬಹುದು. ಕಾಂಗ್ರೆಸ್‌ನವರು 1969 ರಿಂದಲೇ ಕುದುರೆ ವ್ಯಾಪಾರ ಆರಂಭ ಮಾಡಿದ್ದಾರೆ. ಆಗ ಇನ್ನೂ ಸತೀಶ್‌ ಜಾರಕಿಹೊಳಿಯವರು ರಾಜಕಾರಣದಲ್ಲಿಯೇ ಇರಲಿಲ್ಲ, ಕಾಂಗ್ರೆಸ್‌ ಇತಿಹಾಸ ತೆಗೆದು ನೋಡಿದರೆ ಗೊತ್ತಾಗಲಿದೆ. ಮಹಾರಾಷ್ಟ್ರದ ಎಲ್ಲಾ ಶಾಸಕರನ್ನು ಡಿ.ಕೆ. ಶಿವಕುಮಾರ್‌ ಕರೆದುಕೊಂಡು ಬಂದು ವಿಲಾಸ್‌ ರಾವ್ ದೇಶಮುಖ್‌ ಅವರನ್ನು ಕಂಟ್ರೋಲ್‌ ಮಾಡಿದ್ದು ಗೊತ್ತಿಲ್ಲವಾ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ

ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಮುಖ್ಯಮಂತ್ರಿಗಳು 10 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ಆದೇಶ ಮಾಡಿದ್ದಾರೆ. ಏಕೆ ಖರೀದಿ ಮಾಡುತ್ತಿಲ್ಲ. ಎಜೆನ್ಸಿ ನಿಗದಿ ಮಾಡಿ ಹಣ ಬಿಡುಗಡೆ ಮಾಡಿಲ್ಲ. ತಮ್ಮ ಜವಾಬ್ದರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಮೊದಲು ಖರೀದಿ ಆರಂಭಿಸಲಿ ನಂತರ ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಲಿ ಎಂದರು.

Read More
Next Story