ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
x

ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರ ಮಾಡಲಾಯಿತು. 

ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ತಿಳಿಸಿದರು.


ನೆರೆಯ ರಾಜ್ಯ ಆಂಧ್ರಪ್ರದೇಶಕ್ಕೆ ರಾಜ್ಯದಿಂದ ನಾಲ್ಕು ಕುಮ್ಕಿ ಆನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹಸ್ತಾಂತರಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರ ಮಾಡಿದರು. ಈ ವೇಳೆ ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ - ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಆಂಧ್ರಪ್ರದೇಶಕ್ಕೆ ರಾಜ್ಯ ಸರ್ಕಾರ ನಾಲ್ಕು ಆನೆಗಳನ್ನು ಹಸ್ತಾಂತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆರಡು ಆನೆಗಳನ್ನು ಹಸ್ತಾಂತರಿಸಲಿದೆ ಎಂದು ತಿಳಿದುಬಂದಿದೆ. ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ, ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

Read More
Next Story