If the higher-ups decide, I will continue as the full-time CM; Siddaramaiahs strong message!
x

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಿಹಿ ತಿನಿಸಿದರು. 

ವರಿಷ್ಠರು ತೀರ್ಮಾನಿಸಿದರೆ ಪೂರ್ಣಾವಧಿ ಸಿಎಂ ಆಗಿ ಮುಂದುವರಿಕೆ; ಸಿದ್ದರಾಮಯ್ಯ ಮರು ಉವಾಚ

ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಸುಮಾರು 500 ಕೋಟಿ ರೂ. ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ನಾನೇ ಉದ್ಘಾಟನೆಯನ್ನು ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದವಿರಬೇಕು. ಅವರ ಆಶೀರ್ವಾದದಿಂದಲೇ ಇಲ್ಲಿಯವರೆಗೂ ಸಾಗಿ ಬಂದಿದ್ದು, ಅವರ ಪ್ರೀತಿ ಇರುವವರೆಗೂ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆಯನ್ನು ಪೂರ್ಣಗೊಳಿಸಲಾಗಿದೆ. ವರಿಷ್ಠರು ತೀರ್ಮಾನಿಸಿದರೆ ಪೂರ್ಣಾವಧಿ ಸಿಎಂ ಆಗಿ ಅಧಿಕಾರ ನಡೆಸಲಾಗುವುದು ಎನ್ನುವ ಮೂಲಕ ತನ್ನ ರಾಜಕೀಯ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ.

ಬುಧವಾರ(ಜ.7) ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಸುಮಾರು 500 ಕೋಟಿ ರೂ. ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಕಾಲೇಜಿನಲ್ಲಿ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದರು.

ಪ್ರತೀ ವರ್ಷ 6 ಸಾವಿರ ಕೋಟಿ ನಷ್ಟ

ಕೇಂದ್ರ ಸರ್ಕಾರವೇ ಜಿಎಸ್‌ಟಿ ಜಾರಿಗೆ ತಂದು ಎಂಟು ವರ್ಷ ಶೇ.24 ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದರು. ಕರ್ನಾಟಕವೊಂದಕ್ಕೆ ಒಂದು ವರ್ಷಕ್ಕೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ. ಈ ವರ್ಷ ಸುಮಾರು 6 ಸಾವಿರ ಕೋಟಿ ನಷ್ಟವಾಗುತ್ತದೆ. ಇದಕ್ಕೆಲ್ಲ ಯಾರು ಹೊಣೆ. 4.5 ಲಕ್ಷ ಕೋಟಿ ರೂ. ತೆರಿಗೆಯನ್ನು ನಾವು ಕೊಡುತ್ತೇವೆ. ನಮಗೆ ಕೊಡುವುದು 60ರಿಂದ 70 ಸಾವಿರ ಕೋಟಿ ರೂ. ಮಾತ್ರ. ಒಂದು ರೂಪಾಯಿ ಕೊಟ್ಟರೆ 14 ಪೈಸೆ ವಾಪಸ್ಸು ಬರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಗೆ 5.300 ಕೋಟಿ ರೂ. ಕೊಡಲಿಲ್ಲ. 5,495 ಕೋಟಿ ರೂ. ರಾಜ್ಯಕ್ಕೆ ಒದಗಿಸಲು 15 ನೇ ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಅದನ್ನೂ ಕೊಡಲಿಲ್ಲ. ಪೆರಿಫೆರಲ್ ರಿಂಗ್ ರೋಡಿಗೆ 3,000 ಕೋಟಿ ರೂ. ಬೆಂಗಳೂರಿನ ಕೆರೆಯ ಅಭಿವೃದ್ಧಿಗೆ 3,000 ಕೋಟಿ ರೂ. ಕೊಡಲಿಲ್ಲ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಏಕೆ ಪೂರ್ಣಗೊಳಿಸಲಿಲ್ಲ? ಇದನ್ನು ನಾವು ಅಧಿಕಾರಕ್ಕೆ ಬಂದು ಪೂರ್ಣಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಬಳ್ಳಾರಿಯಲ್ಲಿ ಬ್ಯಾನರ್ ಬಿಚ್ಚಿದ್ದರಿಂದ ಪ್ರಚೋದನೆ

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿದಂತೆ ಅನೇಕರು ಒತ್ತಾಯಿಸುತ್ತಿದ್ದಾರೆ. ಬಳ್ಳಾರಿಯಲ್ಲಿ ಗಲಾಟೆಯಾಗಿ ಒಬ್ಬ ವ್ಯಕ್ತಿ ಮೃತಪಡಲು ಬ್ಯಾನರ್‌ನ್ನು ಬಿಚ್ಚಿಹಾಕಿದ್ದೇ ಪ್ರಮುಖ ಕಾರಣ. ಬಳ್ಳಾರಿಯಲ್ಲಿ ಬಿಜೆಪಿಯವರಿಗೆ ಅಸೂಯೆ ತಡೆಯಲಾಗುತ್ತಿಲ್ಲ ಎಂದರು.

ಮಹಿಳೆಯಿಂದಲೇ ಪೊಲೀಸರ ಮೇಲೆ ಹಲ್ಲೆ

ಹುಬ್ಬಳ್ಳಿಯಲ್ಲಿ ಸುಜಾತ ಹಂಡೆ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಮಹಿಳೆಯೇ ಸ್ವತಃ ವಿವಸ್ತ್ರಗೊಂಡು ಮಹಿಳಾ ಪೊಲೀಸರನ್ನು ಕಚ್ಚಿದ್ದಾರೆ. ಆಕೆಯ ಮೇಲೆ ಎಫ್ಐಆರ್ ಆಗಿದ್ದು , ಘಟನೆ ನಡೆದ ಸಂದರ್ಭದಲ್ಲಿ ಹತ್ತು ಜನಕ್ಕೂ ಹೆಚ್ಚು ಮಹಿಳಾ ಪೊಲೀಸರಿದ್ದರು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ತಿಳಿಸಿದರು.

Read More
Next Story