
ಮುಡಾ ಪ್ರಕರಣ| ಸಿಎಂಗೆ ಲೋಕಾಯುಕ್ತ ಕ್ಲೀನ್‌ಚಿಟ್; ಇಂದು ನ್ಯಾಯಾಲಯದಿಂದ ಆದೇಶ ಪ್ರಕಟ
ಲೋಕಾಯುಕ್ತ ಸಲ್ಲಿಸಿರುವ ಬಿ- ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಸಲ್ಲಿಸಿರುವ ಬಿ- ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ -ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.
ಡಿಸೆಂಬರ್ 19 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ ಕೇಸ್ ಡೈರಿ ನೀಡುವಂತೆ ಎಸ್‌ಪಿಪಿ ಸೂಚನೆ ನೀಡಿತ್ತು. ಬಿ-ರಿಪೋರ್ಟ್ ಸಂಬಂಧಿಸಿದಂತೆ ಹೆಚ್ಚುವರಿ ವಾದವಿದ್ದರೆ ಸಲ್ಲಿಸುವಂತೆ ಜಾರಿ ನಿರ್ದೇಶನಾಲಯ, ದೂರುದಾರರಿಗೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.
ಏನಿದು ಪ್ರಕರಣ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ (MUDA) ಮೂಲಕ ನೀಡಲಾದ 14 ಸೈಟ್‌ಗಳ ಹಂಚಿಕೆಯ ಕುರಿತು ಲೋಕಾಯುಕ್ತರು ತನಿಖೆ ನಡೆಸಿದ್ದರು. ತನಿಖೆ ಬಳಿಕ ಲೋಕಾಯುಕ್ತರು ಯಾವುದೇ ಆಪಾದನೆಗೆ ಸಾಕ್ಷ್ಯ ಸಿಗಲಿಲ್ಲವೆಂದು ಸೂಚಿಸಿ 'ಬಿ ರಿಪೋರ್ಟ್' ಸಲ್ಲಿಸಿದ್ದರು. ಈ ವರದಿಯನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸ್ವತಃ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಇದೇ ಪ್ರಕರಣದಲ್ಲಿ ಇಡಿ (ED) ಕೂಡ ಲೋಕಾಯುಕ್ತರ ವರದಿಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ.

