No objection to SIR, will not allow injustice to genuine voters: CM
x

ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ಗೆ ವಿರೋಧವಿಲ್ಲ, ನೈಜ ಮತದಾರರಿಗೆ ಅನ್ಯಾಯವಾಗಲು ಬಿಡಲ್ಲ: ಸಿಎಂ

ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿನ ಅನುಚಿತ ವರ್ತನೆ ಬಗ್ಗೆ ವಿಚಾರಣೆ ನಡೆಸಿ, ಡಿಜಿಪಿಯವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಉನ್ನತಮಟ್ಟದ ಅಧಿಕಾರಿಯೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ(ಜ.19) ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಬಿಎಲ್‌ಓಗಳಿಗೆ ಸೂಚಿಸಲಾಗಿದೆ ಎಂದರು.

ವಿಚಾರಣೆ ನಡೆಸಿ ಶಿಸ್ತಿನ ಕ್ರಮ

ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿನ ಅನುಚಿತ ವರ್ತನೆ ಬಗ್ಗೆ ವಿಚಾರಣೆ ನಡೆಸಿ, ಡಿಜಿಪಿಯವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಉನ್ನತಮಟ್ಟದ ಅಧಿಕಾರಿಯೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ಜನರ ದಾರಿ ತಪ್ಪಿಸುತ್ತಿರುವ ವಿರೋಧಪಕ್ಷಗಳು

ಶಾಸಕ ಜನಾರ್ದಾನ ರೆಡ್ಡಿಯವರು ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲಿಗೆ ಹೋಗಿದ್ದು, ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣವಿನ್ನೂ ನಡೆಯುತ್ತಿದೆ. ಇವರಿಗೆ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವುದೇ ನೈತಿಕ ಅಧಿಕಾರವಿಲ್ಲ. ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವುದರಲ್ಲಿ ನಿರತವಾಗಿದ್ದು, ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಜ. 22 ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದ್ದು, ಅಧಿವೇಶನದಲ್ಲಿ ವಿರೋಧಪಕ್ಷಗಳು ಚರ್ಚೆ ನಡೆಸಲಿ ಎಂದು ತಿಳಿಸಿದರು.

ರಾಜ್ಯದ ಗಡಿವಿವಾದ: ವಾದ ಮಂಡಿಸಲು ಸಿದ್ದ

ಮಹಾರಾಷ್ಟ್ರ- ಕರ್ನಾಟಕ ರಾಜ್ಯದ ಗಡಿವಿವಾದ ವಿಚಾರಣೆ ವಿಷಯ ಸುಪ್ರೀಂಕೋರ್ಟ್‌ನ ಮುಂದೆ ಬರಲಿದ್ದು ವಾದ ಮಂಡಿಸಲು ಕರ್ನಾಟಕ ಕಾನೂನು ತಂಡ ಸಿದ್ಧವಾಗಿದೆ. ರಾಜ್ಯದ ಗಡಿಯ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮಹಾರಾಷ್ಟ್ರದ ಅಧಿಕಾರ ವ್ಯಾಪ್ತಿಗೆ ಬರುತ್ತದೆಯೇ ಎಂಬ ಬಗ್ಗೆಯೇ ನಮ್ಮ ಪ್ರಶ್ನೆಯಿದ್ದು, ಈ ವಿಚಾರ ಮೊದಲು ಇತ್ಯರ್ಥವಾಗಬೇಕು ಎಂದರು.

ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ

ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ. ಚುನಾವಣಾ ಆಯೋಗ ಬ್ಯಾಲೆಟ್‌ ಪೇಪರ್‌ ಬಳಸುತ್ತೇವೆ ಎಂದು ಹೇಳಿರುವುದು ಸ್ವಾಗತರ್ಹ ಎಂದು ತಿಳಿಸಿದರು.

ಒಳಮೀಸಲಾತಿ ವಿಧೇಯಕಕ್ಕೆ ಶೀಘ್ರ ಸ್ಪಷ್ಟನೆ

ಒಳಮೀಸಲಾತಿ ವಿಧೇಯಕದ ಬಗ್ಗೆ ಸ್ಪಷ್ಟನೆ ಕೇಳಿ ರಾಜ್ಯಪಾಲರು ವಿಧೇಯಕವನ್ನು ಹಿಂದಿರುಗಿಸಿದ್ದಾರೆ. ಅವರು ಕೇಳಿರುವ ಪ್ರಶ್ನೆಗಳಿಗೆ ಶೀಘ್ರವೇ ಸೂಕ್ತ ವಿವರಣೆಗಳನ್ನು ನೀಡಲಾಗುವುದು. ವರಿಷ್ಠರು ಕರೆದಾಗ ದೆಹಲಿಗೆ ತೆರಳುವುದಾಗಿ ಹೇಳಿದರು.

Read More
Next Story