ಬಿಜೆಪಿಗೆ ಜನಾಶೀರ್ವಾದ ಇಲ್ಲ- ಕೇವಲ ಹಿಂಬಾಗಿಲ ರಾಜಕೀಯ ಅಷ್ಟೇ: ಸಿಎಂ ಟಾಂಗ್‌
x
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ

ಬಿಜೆಪಿಗೆ ಜನಾಶೀರ್ವಾದ ಇಲ್ಲ- ಕೇವಲ ಹಿಂಬಾಗಿಲ ರಾಜಕೀಯ ಅಷ್ಟೇ: ಸಿಎಂ ಟಾಂಗ್‌

ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದ್ದು, ರಾಜ್ಯದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಿಗೆ ತಿವಿದಿದ್ದಾರೆ.


Click the Play button to hear this message in audio format

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಅಸ್ಥಿರತೆಯ ಕುರಿತಾದ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದು, ವಿರೋಧ ಪಕ್ಷಗಳಿಗೆ ನೇರ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರವು ಕೇವಲ ಐದು ವರ್ಷ ಪೂರೈಸುವುದಲ್ಲದೆ, 2028ರ ಚುನಾವಣೆಯಲ್ಲೂ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮ್ಮ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ವಾಗ್ದಾಳಿಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ "140 ಶಾಸಕರ ಬಲ ನಮ್ಮೊಂದಿಗಿದೆ, ವಿರೋಧ ಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ," ಎಂದು ಹೇಳುವ ಮೂಲಕ ಆಪರೇಷನ್ ಕಮಲ ಅಥವಾ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದ ವದಂತಿಗಳನ್ನು ತಳ್ಳಿಹಾಕಿದ್ದಾರೆ. ವಿಪಕ್ಷಗಳ ಕೆಲಸವೇ "ಉರಿಯುವದರ ಮೇಲೆ ಉಪ್ಪು ಸುರಿಯುವುದು" ಎಂದು ವ್ಯಂಗ್ಯವಾಡುವ ಮೂಲಕ, ಆಡಳಿತ ಪಕ್ಷದ ಶಾಸಕರು ಒಗ್ಗಟ್ಟಾಗಿದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ.

ಬಿಜೆಪಿಯ 'ಹಿಂಬಾಗಿಲ ರಾಜಕಾರಣ'ದ ವಿಶ್ಲೇಷಣೆ

ಇದೇ ವೇಳೆ ಬಿಜೆಪಿಯ ರಾಜಕೀಯ ಇತಿಹಾಸವನ್ನು ಕೆದಕಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಬಿಜೆಪಿ ಒಮ್ಮೆಯೂ ಪೂರ್ಣ ಜನಾದೇಶ ಪಡೆದಿಲ್ಲ ಎಂದು ಪ್ರತಿಪಾದಿಸಿದರು. 2008 ಮತ್ತು 2018ರಲ್ಲಿ ಬಿಜೆಪಿ ಹಿಂಬಾಗಿಲ ಮೂಲಕ (ಆಪರೇಷನ್ ಕಮಲ) ಅಧಿಕಾರಕ್ಕೆ ಬಂದಿತೇ ಹೊರತು, ಜನರ ನೇರ ಆಶೀರ್ವಾದದಿಂದಲ್ಲ ಎಂದು ವಿಶ್ಲೇಷಿಸಿದರು. ಜನರ ನಾಡಿಮಿಡಿತ ಕಾಂಗ್ರೆಸ್ ಪರವಾಗಿದ್ದು, ಬಿಜೆಪಿ ಸದಾಕಾಲ ವಿರೋಧ ಪಕ್ಷದ ಸ್ಥಾನದಲ್ಲಿಯೇ ಕೂರಬೇಕಾಗುತ್ತದೆ ಎಂಬ ಭವಿಷ್ಯ ನುಡಿದರು.

140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ. 2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದರು.

'ನಾನು' ಅಳಿದು 'ನಾವು' ಉಳಿಯಬೇಕು

ಕನಕದಾಸರ ತತ್ವಪದವಾದ "ನಾನು ಹೋದರೆ ಹೋದೇನು" ಎಂಬುದನ್ನು ಮಾರ್ಮಿಕವಾಗಿ ಬಳಸಿಕೊಂಡ ಸಿದ್ದರಾಮಯ್ಯ ಅಹಂಕಾರದ 'ನಾನು' ಅಳಿಯಬೇಕು ಎಂದರು. "ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ" ಎನ್ನುವ ಮೂಲಕ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದರು. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ, ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಒಟ್ಟಾರೆಯಾಗಿ, ಈ ಅಧಿವೇಶನದ ಮೂಲಕ ಸಿದ್ದರಾಮಯ್ಯನವರು ತಮ್ಮ ವಿರೋಧಿಗಳಿಗೆ ಮತ್ತು ಸ್ವಪಕ್ಷೀಯರಿಗೆ ತಮ್ಮ ನಾಯಕತ್ವದ ಸುಭದ್ರತೆಯ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ

2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “‘ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

Read More
Next Story