ಸಿಎಂ ಸಿದ್ದು ಲಕ್‌ನಲ್ಲೇ ಮುಂದುವರಿದಿದ್ದಾರೆ, ಮುಂದೆ ಗೊತ್ತಿಲ್ಲ: ಪಾವಗಡ ಶಾಸಕ ವೆಂಕಟೇಶ್
x

''ಸಿಎಂ ಸಿದ್ದು ಲಕ್‌ನಲ್ಲೇ ಮುಂದುವರಿದಿದ್ದಾರೆ, ಮುಂದೆ ಗೊತ್ತಿಲ್ಲ": ಪಾವಗಡ ಶಾಸಕ ವೆಂಕಟೇಶ್

ಶಾಸಕರ ಈ ಹೇಳಿಕೆಯು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ಆಂತರಿಕ ಚರ್ಚೆಗಳಿಗೆ ಮತ್ತಷ್ಟು ಇಂಬು ನೀಡಿದಂತಾಗಿದೆ.


"ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯಕ್ಕೆ ಅದೃಷ್ಟ (ಲಕ್) ದಿಂದ ತಮ್ಮ ಹುದ್ದೆಯಲ್ಲಿ ಮುಂದುವರಿದಿದ್ದಾರೆ, ಆದರೆ ಮುಂದೆ ಏನಾಗಲಿದೆ ಎಂದು ಹೇಳಲು ಸಾಧ್ಯವಿಲ್ಲ" ಎಂದು ಪಾವಗಡದ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಯ ಬದಲಾವಣೆ ಕುರಿತ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಹೇಳಿಕೆ ನೀಡಿದರು. "ಸಿಎಂ ಸ್ಥಾನದ ಬಗ್ಗೆ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ನನ್ನ ನಿಲುವು ಯಾವಾಗಲೂ ಹೈಕಮಾಂಡ್‌ನ ತೀರ್ಮಾನಕ್ಕೆ ಬದ್ಧವಾಗಿರುತ್ತದೆ. ನಾನು ಯಾರ ಪರವಾಗಿಯೂ ಅಥವಾ ವಿರೋಧವಾಗಿಯೂ ಮಾತನಾಡುವಷ್ಟು ದೊಡ್ಡ ನಾಯಕನಾಗಿ ಬೆಳೆದಿಲ್ಲ," ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಾರ್ಯವನ್ನು ಶ್ಲಾಘಿಸಿದ ವೆಂಕಟೇಶ್, "ಅವರು ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಯುವಕರನ್ನು ಪ್ರೋತ್ಸಾಹಿಸುತ್ತಿದ್ದಾರೆ" ಎಂದರು. ಶಾಸಕರ ಈ ಹೇಳಿಕೆಯು, ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತು ನಡೆಯುತ್ತಿರುವ ಆಂತರಿಕ ಚರ್ಚೆಗಳಿಗೆ ಮತ್ತಷ್ಟು ಇಂಬು ನೀಡಿದಂತಾಗಿದೆ.

Read More
Next Story