Siddaramaiah government celebrates 1000 days: Huge Sadhana convention in Haveri on Feb. 13
x

ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಿದ್ದರಾಮಯ್ಯ ಸರ್ಕಾರಕ್ಕೆ ಸಾವಿರ ದಿನಗಳ ಸಂಭ್ರಮ: ಫೆ.13 ರಂದು ಹಾವೇರಿಯಲ್ಲಿ ಬೃಹತ್ ಸಾಸಮಾವೇಶ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಹಾಗೂ ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ (ಜ.13) ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ತಮಿಳುನಾಡಿನ ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಅವರನ್ನು ಬೀಳ್ಕೊಡಲಾಗುವುದು ಎಂದರು.

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು. ಕಾಂಗ್ರೆಸ್‌ ಸೇರಿದಂತೆ ಯಾವುದೇ ಶಾಸಕರಿಗೆ ನಾಯಕತ್ವದ ಬಗ್ಗೆ ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ಕುರಿತು ಮಾತನಾಡಬೇಕು. ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ರಾಜ್ಯ ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಗ್ಯಾರಂಟಿ ಯೋಜನೆಗಳು ಎಲ್ಲರನ್ನು ತಲುಪಿದ್ದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳು ಸೇರಿದಂತೆ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಎಚ್‌ಡಿಕೆ ವರ್ತನೆ ಗಮನಿಸಿಲ್ಲ

ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ಹೊರತು ನಾವು ಗಮನಿಸುವುದಿಲ್ಲ ಎಂದು ತಿಳಿಸಿದರು.

Read More
Next Story