PM Modi should answer for his statement on changing the constitution: CM Siddaramaiah
x

ಮುಖ್ಯಮಂತ್ರಿ ಸಿದ್ದರಾಮಯ್ಯ 

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ: ಬಾಕಿ ವಿಧೇಯಕಗಳಿಗೆ ರಾಷ್ಟ್ರಪತಿ ಅಂಕಿತ, ಅನುದಾನಕ್ಕೆ ಮನವಿ

ರಾಯಚೂರಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ, ಸಂಜೆ ಆಂಧ್ರಪ್ರದೇಶದ ಕರ್ನೂಲ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ದೆಹಲಿಗೆ ತಲುಪಿ, ರಾತ್ರಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.


ಸಿಎಂ ಸಿದ್ದರಾಮಯ್ಯ ಅವರು ಇಂದು (ಜೂನ್ 23) ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯದ ಹಲವು ಬಾಕಿ ವಿಧೇಯಕಗಳಿಗೆ ಸಹಿ ಹಾಕುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲಿದ್ದಾರೆ. ಜೊತೆಗೆ, ಕೇಂದ್ರ ಸರ್ಕಾರದಿಂದ ರಾಜ್ಯದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಚರ್ಚೆಗಳನ್ನು ನಡೆಸಲು ಅವರು ಉದ್ದೇಶಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ರಾಯಚೂರಿಗೆ ತೆರಳಲಿದ್ದಾರೆ. ಅಲ್ಲಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ, ಸಂಜೆ ಆಂಧ್ರಪ್ರದೇಶದ ಕರ್ನೂಲ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ದೆಹಲಿಗೆ ತಲುಪಿ, ರಾತ್ರಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಕಾರ್ಯಸೂಚಿ ಏನು?

ನಾಳೆ (ಜೂನ್ 24) ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ರಾಷ್ಟ್ರಪತಿ ಭವನಕ್ಕೆ ರವಾನೆಯಾಗಿರುವ ರಾಜ್ಯದ ವಿಧೇಯಕಗಳಿಗೆ ಸಹಿ ಹಾಕುವಂತೆ ಮನವಿ ಮಾಡಲಿದ್ದಾರೆ. ಇದೇ ವೇಳೆ, ಸಂಜೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ, ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಹಣಕಾಸು ಬಿಡುಗಡೆ ಮಾಡುವಂತೆ ಒತ್ತಾಯಿಸಲಿದ್ದಾರೆ.

ಮುಖ್ಯಮಂತ್ರಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಕೋರಿದ್ದಾರೆ. ಅವಕಾಶ ಸಿಕ್ಕರೆ, ಬುಧವಾರ (ಜೂನ್ 25) ಪ್ರಧಾನಿಯವರೊಂದಿಗೆ ರಾಜ್ಯದ ಯೋಜನೆಗಳು ಮತ್ತು ಅನುದಾನದ ಬಿಡುಗಡೆ ಕುರಿತು ಚರ್ಚಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿದೇಶ ಪ್ರವಾಸದಿಂದ ವಾಪಸಾದರೆ, ಅವರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ವಿಧಾನಪರಿಷತ್ ಸದಸ್ಯರ ನೇಮಕಾತಿಯ ಬಗ್ಗೆ ಸಮಾಲೋಚನೆ ನಡೆಸುವ ಸಂಭವವಿದೆ.

Read More
Next Story