ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜಕೀಯ ಹೇಳಿಕೆ : ಸಂಸದ ಬಸವರಾಜ ಬೊಮ್ಮಾಯಿ ಟೀಕೆ
x

ಬಸವರಾಜ್‌ ಬೊಮ್ಮಾಯಿ

ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜಕೀಯ ಹೇಳಿಕೆ : ಸಂಸದ ಬಸವರಾಜ ಬೊಮ್ಮಾಯಿ ಟೀಕೆ

14 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣ ಬರುತ್ತದೆ. ಸಿಎಂ ಸಿದ್ದರಾಮಯ್ಯ ಇಲ್ಲದ ಆರೋಪ ಮಾಡುತ್ತಿದ್ದಾರೆ.


ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯವಾಗಿ ಮಾತನಾಡುತ್ತಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 14 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹಣ ಬರುತ್ತದೆ. ಸಿದ್ದರಾಮಯ್ಯ ಹೊಸದೇನು ಹೇಳುತ್ತಿಲ್ಲ. ಈಗಾಗಲೇ ಹಲವು ಬಾರಿ ಸುಳ್ಳು ಹೇಳಿದ್ದಾರೆ. ಈಗ ಅದನ್ನೇ ಮತ್ತೆ ಹೇಳಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ಅನುದಾನ ಶೇ.32 ರಿಂದ ಶೇ.42 ಕ್ಕೆ ಹೆಚ್ಚಿಸಿದರು. ಸಿದ್ದರಾಮಯ್ಯಗೆ ಇದು ಗೊತ್ತಿದ್ದರೂ, ಮರೆ ಮಾಚುತ್ತಾರೆ. ಶೇ 40 ರಿಂದ 50ಕ್ಕೆ ಹೆಚ್ಚಳ ಮಾಡಬೇಕೆನ್ನುವುದು ನಮ್ಮೆಲ್ಲರ ಬೇಡಿಕೆಯಾಗಿದೆ. 14 ನೇ ಹಣಕಾಸು ಆಯೋಗ ಸಭೆ ನಡೆಸಿದ ಸಂದರ್ಭದಲ್ಲಿ ಐದು ಜನ ಕಾಂಗ್ರೆಸ್ ಸಚಿವರಿದ್ದರು. ಆಗ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡದೇ ತಮ್ಮ ತಪ್ಪು ಮುಚ್ಚಿಕೊಳ್ಳಲು ಈಗ ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಕ್ಕೆ ಕಾಂಗ್ರೆಸ್‌ನಿಂದಲೇ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

14 ನೇ ಹಣಕಾಸು ಆಯೋಗಕ್ಕೆ ಹೋಲಿಕೆ ಮಾಡಿದರೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಕೇಂದ್ರದಿಂದ 1 ಲಕ್ಷ ಕೋಟಿ ರೂಪಾಯಿ ಹೆಚ್ಚಿಗೆ ಬರುತ್ತದೆ. ಈಗಾಗಲೇ 14 ನೇ ಹಣಕಾಸು ಆಯೋಗದಲ್ಲಿ ಬಂದಷ್ಟು ಹಣ ರಾಜ್ಯಕ್ಕೆ ಬಂದಿದೆ. ಇನ್ನು ಎರಡು ವರ್ಷ ಬರುತ್ತದೆ. ಗ್ಯಾರೆಂಟಿ ಯೋಜನೆಗೆ ಹಣ ಹೊಂದಿಸಲಾಗದೇ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯವಾಗಿ ಮಾತನಾಡುತ್ತಾರೆ‌. ರಾಜ್ಯದ ರೈಲ್ವೆ ಯೋಜನೆಗೆ ಯುಪಿಎ ಅವಧಿಯಲ್ಲಿ 700 ಕೋಟಿ ರೂಪಾಯಿ ಬಂದಿತ್ತು. ಈ ವರ್ಷ ಕೇಂದ್ರ ಸರ್ಕಾರ 7700 ಕೋಟಿ ರೂಪಾಯಿ ನೀಡಿದೆ. ಅದಕ್ಕೆ ಮ್ಯಾಚಿಂಗ್ ಗ್ರ್ಯಾಂಟ್ ಕೊಡಲು ರಾಜ್ಯಸರ್ಕಾರಕ್ಕೆ ಆಗುತ್ತಿಲ್ಲ. ಆರೋಗ್ಯ, ಗ್ರಾಮಿಣಾಭಿವೃದ್ದಿ, ರಸ್ತೆ ಸೇರಿದಂತೆ ಹಲವಾರು ಯೋಜನೆಗಳಿಗೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ‌. ಅದನ್ನು ರಾಜ್ಯ ಸರ್ಕಾರ ಹೇಳುತ್ತಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಜಾತಿ ಸಮೀಕ್ಷೆ ಅಧಿಕಾರವಿಲ್ಲ

ಜಾತಿ ಸಮೀಕ್ಷೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ರಾಜ್ಯ ಸರ್ಕಾರಕ್ಕೆ ಇಲ್ಲ. ಮುಖ್ಯಮಂತ್ರಿಗಳು ಸುಮ್ಮನೆ ಹಿಂದುಳಿದ ವರ್ಗದ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಹತ್ತು ವರ್ಷದಿಂದ ಇವರೇ ಮುಖ್ಯಮಂತ್ರಿಯಾಗಿದ್ದರು. ಆಗ ಯಾವ ಕಾರಣಕ್ಕಾಗಿ ಮಾಡಲಿಲ್ಲ. ಜಾತಿ ಸಮೀಕ್ಷೆ ವಿಚಾರದಲ್ಲಿ ಮುಖ್ಯಮಂತ್ರಿ ಬಹಳ ಸಂಕಷ್ಟಕ್ಕೆ ಸಿಲುಕಿದ್ದರು. ಹೈಕಮಾಂಡ್ ಅದರಿಂದ ಇವರನ್ನು ರಕ್ಷಿಸಿದೆ. ಆದರೆ, ಕೇಂದ್ರ ಸರ್ಕಾರವೇ ಮಾಡುವ ಜಾತಿ ಸಮೀಕ್ಷೆ ಅಂತಿಮ ಎಂದು ತಿಳಿಸಿದ್ದಾರೆ.


Read More
Next Story