Red Chilli | ಕೆಂಪು ಮೆಣಸಿನಕಾಯಿ ಬೆಳೆಗಾರರ ನೆರವಿಗೆ ಧಾವಿಸಿ; ಪ್ರಧಾನಿ ಮೋದಿಗೆ ಸಿಎಂ ಪತ್ರ
x

Red Chilli | ಕೆಂಪು ಮೆಣಸಿನಕಾಯಿ ಬೆಳೆಗಾರರ ನೆರವಿಗೆ ಧಾವಿಸಿ; ಪ್ರಧಾನಿ ಮೋದಿಗೆ ಸಿಎಂ ಪತ್ರ

ರಾಜ್ಯದಲ್ಲಿ ಗುಂಟೂರು ಮೆಣಸಿನಕಾಯಿ ಉತ್ಪಾದನಾ ವೆಚ್ಚವನ್ನು ಕ್ವಿಂಟಲ್‌ಗೆ 12,675 ರೂ.ಗಳನ್ನು ಕೃಷಿ ಬೆಲೆ ಆಯೋಗ ಮಾಡಿದೆ. ಆದರೆ, ರೈತರು ಮಾರುಕಟ್ಟೆಯಲ್ಲಿ ಕೇವಲ 8,300 ರೂ.ಗಳಿಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ


ಎಂಐಎಸ್(ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ರಾಜ್ಯದ ಗುಂಟೂರು ಮೆಣಸಿನಕಾಯಿ ಬೆಳೆಯುವ ರೈತರಿಗೂ ವಿಸ್ತರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಕೃಷಿ ಸಚಿವ ಶಿವರಾಜ ಸಿಂಗ್‌ ಚೌಹಾಣ್‌ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಶ್ರಿತ ಕೆಂಪು ಮೆಣಸಿನಕಾಯಿ ಬೆಳೆಯುವ ರೈತರು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಆಂಧ್ರಪ್ರದೇಶದ ಮೆಣಸಿನಕಾಯಿ ಬೆಳೆಗಾರರಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಉತ್ಪಾದನೆಯ ಶೇ 25ವರೆಗೆ ಕ್ವಿಂಟಲ್‌ಗೆ ₹11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ ನಿಗದಿಪಡಿಸಿದೆ. ಅದೇ ರೀತಿ ಕರ್ನಾಟಕದ ರೈತರಿಗೂ ಯೋಜನೆ ವಿಸ್ತರಿಸಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಗುಂಟೂರು ಮೆಣಸಿನಕಾಯಿ ಉತ್ಪಾದನಾ ವೆಚ್ಚವನ್ನು ಕ್ವಿಂಟಲ್‌ಗೆ 12,675 ರೂ.ಗಳನ್ನು ಕೃಷಿ ಬೆಲೆ ಆಯೋಗ ಮಾಡಿದೆ. ಆದರೆ, ರೈತರು ಮಾರುಕಟ್ಟೆಯಲ್ಲಿ ಕೇವಲ 8,300 ರೂ.ಗಳಿಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಬರ ಪೀಡಿತ ಪ್ರದೇಶಗಳಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳೂ ಇವೆ. ಮೆಣಸಿನಕಾಯಿ ಕೃಷಿ ಅವಲಂಬಿಸಿರುವ ಸಾವಿರಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ನೆಲೆಯಾಗಿದೆ. ಇದನ್ನು ನಿರ್ಲಕ್ಷಿಸಿದರೆ ಆರ್ಥಿಕ ಸಂಕಷ್ಟ ಹೆಚ್ಚಲಿದೆ. ಜೊತೆಗೆ ರೈತರನ್ನು ಸಾಲದ ದವಡೆಗೆ ದೂಡಿದಂತಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಆಂಧ್ರಪ್ರದೇಶದಂತೆ ಕರ್ನಾಟಕಕ್ಕೂ ಬೆಲೆ ಕೊರತೆ ಪಾವತಿ ಯೋಜನೆ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

Read More
Next Story