ದ್ವೇಷ ಭಾಷಣ | ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಪಿ.ಸಿ ಮೋಹನ್ ವಿರುದ್ಧ ದೂರು
x
ಪಿ.ಸಿ ಮೋಹನ್‌, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ

ದ್ವೇಷ ಭಾಷಣ | ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಪಿ.ಸಿ ಮೋಹನ್ ವಿರುದ್ಧ ದೂರು

ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ದ್ವೇಷ ಭಾಷಣ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಂಸದರಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಹಾಗೂ ಪಿ.ಸಿ ಮೋಹನ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದ್ವೇಷದ ಮಾತುಗಳ ವಿರುದ್ಧ ಅಭಿಯಾನ (Campaign against hate speech) ಸಂಘಟನೆ ಆಗ್ರಹಿಸಿದೆ.


ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ, ದ್ವೇಷ ಭಾಷಣ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಂಸದರಾದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಹಾಗೂ ಪಿ.ಸಿ ಮೋಹನ್ ವಿರುದ್ಧ ಕ್ರಮಕೈಗೊಳ್ಳುವಂತೆ ದ್ವೇಷದ ಮಾತುಗಳ ವಿರುದ್ಧ ಅಭಿಯಾನ (Campaign against hate speech) ಸಂಘಟನೆ ದೂರು ಸಲ್ಲಿಸಿದೆ.

ಈ ಸಂಬಂಧ ಭಾರತೀಯ ಚುನಾವಣಾ ಆಯೋಗ, ಕರ್ನಾಟಕ ಚುನಾವಣಾ ಆಯೋಗ, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಸಂಘಟನೆ ದೂರು ಸಲ್ಲಿಸಿದೆ.

ದೂರು ಸಲ್ಲಿಕೆ ಬಳಿಕ ಮಾತನಾಡಿದ ಸಂಘಟನೆಯ ಸದಸ್ಯೆ ಶಿಲ್ಪಾ ಪ್ರಸಾದ್ ಅವರು, “ನಗರ್ತಪೇಟೆ ಗಲಾಟೆ ಪ್ರಕರಣವನ್ನು ಉದ್ದೇಶ ಪೂರ್ವಕವಾಗಿ ತಿರುಚಲಾಗಿದೆ. ಇದನ್ನು ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷ ಬಿತ್ತುವುದಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಪ್ರಕರಣವನ್ನು ತಿರುಚಿ, ಸುಳ್ಳು ಮಾಹಿತಿ ನೀಡಲಾಗುತ್ತಿದೆ” ಎಂದು ಆರೋಪಿಸಿದರು.

“ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಶೋಭಾ ಕರಂದ್ಲಾಜೆ ದ್ವೇಷ ಭಾಷಣ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಮೇಲೆ ರ್‍ಯಾಲಿ ನಡೆಸುವುದಕ್ಕೆ ಚುನಾವಣಾ ಆಯೋಗದ ಅನುಮತಿ ಪಡೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಜಾಗ ನಿಗದಿ ಮಾಡಲಾಗಿದೆ. ಅಲ್ಲಿ ಮಾತ್ರ ಪ್ರತಿಭಟನೆ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲಾ ನಿಯಮಗಳನ್ನು ಸಂಸದರು ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ ತೇಜಸ್ವಿ ಸೂರ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಜಿಹಾದಿಗಳು ಎನ್ನುವ ಪದ ಬಳಕೆ ಮಾಡಿದ್ದು, ಸಾರ್ವಜನಿಕರನ್ನು ಪ್ರಚೋದಿಸಿದ್ದಾರೆ. ಹೀಗಾಗಿ, ತೇಜಸ್ವಿ ಸೂರ್ಯ ವಿರುದ್ಧ ಸೆಕ್ಷನ್ 123(ಎ) ಜನಪ್ರತಿನಿಧಿ ಕಾಯ್ದೆ, ಮಾದರಿ ನೀತಿ ಸಂಹಿತೆ ಮತ್ತು ಸೆಕ್ಷನ್ 153(ಎ), 295(ಎ) 505(2) ಉಲ್ಲಂಘನೆಗಾಗಿ ದೂರು ದಾಖಲಿಸಲು ಕೋರಲಾಗಿದೆ" ಎಂದರು.

ಇನ್ನು "ಸಂಸದರಾದ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಪಿ.ಸಿ ಮೋಹನ್ ಮತ್ತು ಇತರರ ವಿರುದ್ಧ ದ್ವೇಷ ಭಾಷಣ, ಪ್ರತಿಭಟನಾ ಕಾನೂನು ಉಲ್ಲಂಘನೆ ಮಾಡಿ, ಸಮುದಾಯಗಳ ನಡುವೆ ದ್ವೇಷ ಬಿತ್ತುತ್ತಿರುವ ಆರೋಪದ ಸೆಕ್ಷನ್ 153(ಎ), 295(ಎ), 505(2)ಗಳಡಿ ಪ್ರಕರಣ ದಾಖಲಿಸಲು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ ದೂರಿನ ಪ್ರತಿಯನ್ನು ಕರ್ನಾಟಕ ಹಾಗೂ ಭಾರತ ಚುನಾವಣಾ ಆಯೋಗಕ್ಕೂ ಸಲ್ಲಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದರು.

Read More
Next Story