ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ದೂರು ದಾಖಲು
x
ಕೆಎಸ್ ಶಿವರಾಮು ವಿರುದ್ಧ ಪ್ರಕರಣ ದಾಖಲಾಗಿದೆ.

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ: ಕೆಎಸ್ ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ದೂರು ದಾಖಲು

ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಅಶೋಕ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪಂಚಮಸಾಲಿ ಸಮಾಜದವರು ಹೇಡಿಗಳಲ್ಲ. ಕೆಎಸ್ ಶಿವರಾಮು ತಕ್ಷಣವೇ ಸ್ವಾಮೀಜಿಗಳ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Click the Play button to hear this message in audio format

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿರುದ್ಧ ದಾವಣಗೆರೆಯಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ ಜಿಲ್ಲಾ ಪಂಚಮಸಾಲಿ‌‌ ಸಮಾಜದ ಅಧ್ಯಕ್ಷ ಗೋಪನಾಳ್ ಅಶೋಕ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪಂಚಮಸಾಲಿ ಸಮಾಜದವರು ಹೇಡಿಗಳಲ್ಲ. ಕೆಎಸ್ ಶಿವರಾಮು ತಕ್ಷಣವೇ ಸ್ವಾಮೀಜಿಗಳ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೆಎಸ್​ ಶಿವರಾಮು ಹೇಳಿದ್ದೇನು?

ಪಂಚಮಸಾಲಿ ಪ್ರತಿಭಟನೆಯ ಬಗ್ಗೆ ಮೈಸೂರಿನಲ್ಲಿ ಹೇಳಿಕೆ ನೀಡಿದ್ದ ಶಿವರಾಮು, ಬಸವಜಯ ಮೃತ್ಯುಂಜಯ ಸ್ವಾಮೀಜಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲೆಂದು ಬಿಜೆಪಿಯವರಿಂದ ಸುಪಾರಿ ತೆಗೆದುಕೊಂಡಿದ್ದಾರೆ. ಸ್ವಾಮೀಜಿ ಬಿಜೆಪಿ ಏಜೆಂಟ್​ರಂತೆ ವರ್ತಿಸುತ್ತಿದ್ದಾರೆ. ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಆಕ್ರೋಶ ವ್ಯಕ್ತಪಡಿಸಿದ್ದರು.

Read More
Next Story