ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು
x

ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಶಾಸಕರ 'ಕುದುರೆ ವ್ಯಾಪಾರ': ಛಲವಾದಿ ನಾರಾಯಣಸ್ವಾಮಿ ವಿರುದ್ಧ ದೂರು ದಾಖಲು

ಮಂಗಳವಾರ ಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ವಕೀಲರ ತಂಡ ದೂರು ಸಲ್ಲಿಸಿದ್ದು, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.


Click the Play button to hear this message in audio format

ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲಾಗುತ್ತಿದೆ ಎಂಬ ಆಧಾರ ರಹಿತ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳವಾರ ಕಾಂಗ್ರೆಸ್ ಪಕ್ಷದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷ ಜುನೈದ್ ಪಿ.ಕೆ. ನೇತೃತ್ವದಲ್ಲಿ ವಕೀಲರ ತಂಡವು ದೂರು ನೀಡಿದ್ದು, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಸೋಮವಾರ (ನ.24) ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಛಲವಾದಿ ನಾರಾಯಣಸ್ವಾಮಿ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಶಾಸಕರಿಗೆ ತಲಾ 50 ಕೋಟಿ ರೂ. ನಗದು, ಒಂದು ಫ್ಲ್ಯಾಟ್ ಹಾಗೂ ಫಾರ್ಚೂನರ್ ಕಾರು ಕೊಡಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡನೀಯ ಹಾಗೂ ಆಧಾರರಹಿತವಾಗಿದೆ. ಒಂದು ವೇಳೆ ಇಂತಹ ಘಟನೆ ನಡೆದರೆ ಇದು ಭ್ರಷ್ಟಾಚಾರದ ಒಂದು ಭಾಗವಾಗುತ್ತದೆ. ಈ ಬಗ್ಗೆ ಪ್ರಚಾರ ಗಿಟ್ಟಿಸಲು ಕಾಂಗ್ರೆಸ್ ಶಾಸಕರ ಕುರಿತು ಇಲ್ಲಸಲ್ಲದ ಆರೋಪ ಮಾಡಿರುವ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Read More
Next Story