
ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿಗೆ ನಮ್ಮ ತಕರಾರು ಇಲ್ಲ: ಸಿ.ಎಂ
ಸಂಸತ್ತು, ವಿಧಾನಸಭೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸಂಸತ್ತು, ವಿಧಾನಸಭೆಯಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
2028ರಲ್ಲಿ ಮೀಸಲಾತಿ ನೀಡುವುದಾಗಿ ನರೇಂದ್ರ ಮೋದಿ ಹೇಳುತ್ತಿದ್ದು, ಅವರು ಈಗಾಗಲೇ ಜಾರಿ ಮಾಡಬಹುದಿತ್ತು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನ ಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದು ಅವರು ತಿಳಿಸಿದರು.
'ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕಾಂಗ್ರೆಸ್ ಮುಖಂಡರಾದ ವೀರಪ್ಪ ಮೊಯಿಲಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಮಾಜಿ ಸಚಿವರಾದ ರಾಣಿ ಸತೀಶ್, ಎಚ್.ಎಂ. ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.