
ಕಾಂಗ್ರೆಸ್ ಪಕ್ಷ ಯಾವತ್ತೂ ಕೊಟ್ಟ ಮಾತಿನಂತೆ ನಡ್ಕೊಳಲ್ಲ ಎಂದ ಸಿದ್ದರಾಮಯ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣಗಳಲ್ಲಿ ಆಗಾಗ ಎಡವಟ್ಟು ಮಾಡಿಕೊಂಡು ಟ್ರೋಲ್ ಆಗುತ್ತಲೇ ಇರುತ್ತಾರೆ. ಇದೀಗ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಎನ್ನುವ ಬದಲಿಗೆ ಕಾಂಗ್ರೆಸ್ ಎಂದು ಹೇಳಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಅವರ ಪರವಾಗಿ ಪ್ರಚಾರ ಮಾಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ʼʼಕಾಂಗ್ರೆಸ್ ಪಕ್ಷ ಯಾವತ್ತೂ ಕೊಟ್ಟ ಮಾತಿನಂತೆ ನಡ್ಕೊಳಲ್ಲʼʼ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಅವರು ಸಾಕಷ್ಟು ಬಾರಿ ಈ ರೀತಿ ತಪ್ಪಾಗಿ ಮಾತನಾಡುವ ಮೂಲಕ ಸಾಕಷ್ಟು ಮುಜುಗರಕ್ಕೀಡಾಗಿದ್ದರು. ಇದೀಗ ಮತ್ತೇ ಅದೇ ರೀತಿ ತಪ್ಪಾಗಿ ಮಾತನಾಡುವ ಮೂಲಕ ಟ್ರೋಲಿಗರಿಗೆ ಆಹಾರವಾಗಿದ್ದಾರೆ.
Next Story