Mysore MUDA Case | ಜೆಡಿಎಸ್-ಬಿಜೆಪಿ ವಿರುದ್ಧ ಡಿಎಸ್ಎಸ್ ಅರೆಬೆತ್ತಲೆ ಮೆರವಣಿಗೆ
x

Mysore MUDA Case | ಜೆಡಿಎಸ್-ಬಿಜೆಪಿ ವಿರುದ್ಧ ಡಿಎಸ್ಎಸ್ ಅರೆಬೆತ್ತಲೆ ಮೆರವಣಿಗೆ

ಮುಡಾ ಹಗರಣದಲ್ಲಿನ ಬಿಜೆಪಿ ಹಾಗೂ ಜೆಡಿಎಸ್‌ ಷಡ್ಯಂತ್ರ್ಯ ಖಂಡಿಸಿ ನ. 6ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅರಬೆತ್ತಲೆ ನಡೆಸಲು ತೀರ್ಮಾನಿಸಲಾಗಿದೆ.


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ಷಡ್ಯಂತ್ರ್ಯ ನಡೆಸುತ್ತಿವೆ. ಇದನ್ನು ಖಂಡಿಸಿ ನ.6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಯೋಜಕ ಡಿ.ಜಿ. ಸಾಗರ್ ಹೇಳಿದ್ದಾರೆ.

ಕಲಬುರಗಿ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜಭವನ, ಇಡಿ, ಐಟಿ, ಸಿಬಿಐನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳಬಾರದು. ಸಿಎಂ ಸಿದ್ದರಾಮಯ್ಯ ಅವರು ತನಿಖಾ ಸಂಸ್ಥೆಗಳ ಪರ ನಿಂತು, ತನಿಖೆ ಎದುರಸಬೇಕು. ಯಾವುದೇ ಕಾರಣಕ್ಕೂ ವಿಪಕ್ಷಗಳ ರಾಜೀನಾಮೆ ಬೇಡಿಕೆಗೆ ಮಣಿಯಬಾರದು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಹಮ್ಮಿಕೊಂಡಿದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.

Read More
Next Story